ವಾರಂಟ್ ಗೂ ಡೋಂಟ್ ಕೇರ್: ನಟಿ ಜಯಪ್ರದಾ ಬಂಧಿಸಿ ಹಾಜರುಪಡಿಸಿ ಎಂದ ಕೋರ್ಟ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿ ನಟಿ ಜಯಪ್ರದಾ ಅವರನ್ನು ಬಂಧಿಸಿ ಫೆಬ್ರವರಿ 27 ರಂದು ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ರಾಂಪುರದ ಸಂಸದ-ಶಾಸಕರ ನ್ಯಾಯಾಲಯ ಪೊಲೀಸರಿಗೆ ಆದೇಶಿಸಿದೆ.

ಜಯಪ್ರದಾ ವಿರುದ್ಧ ಏಳನೇ ಬಾರಿಗೆ ಜಾಮೀನು ರಹಿತ ವಾರಂಟ್ ಹೊರಡಿಸಿದರೂ ವಿಚಾರಣೆಗೆ ನ್ಯಾಯಾಲಯಕ್ಕೆ ಹಾಜರಾಗಲಿಲ್ಲ ಎಂದು ಹಿರಿಯ ಪ್ರಾಸಿಕ್ಯೂಷನ್ ಅಧಿಕಾರಿ ಅಮರನಾಥ್ ತಿವಾರಿ ಹೇಳಿದ್ದಾರೆ.

ಹೀಗಾಗಿ ವಿಶೇಷ ತಂಡ ರಚಿಸಿ ಜಯಪ್ರದಾ ಅವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ನ್ಯಾಯಾಲಯ ಪೊಲೀಸ್ ಆಯುಕ್ತರಿಗೆ ಆದೇಶಿಸಿದೆ.

ಏನಿದು ಪ್ರಕರಣ?
ಜಯಪ್ರದಾ ಅವರು 2019ರ ಲೋಕಸಭಾ ಚುನಾವಣೆಯಲ್ಲಿ ರಾಂಪುರದಿಂದ ಸ್ಪರ್ಧಿಸಿದ್ದರು. ಚುನಾವಣೆಯ ಸಮಯದಲ್ಲಿ, ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಕ್ಕಾಗಿ ನಟಿಯ ವಿರುದ್ಧ ಎರಡು ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಲಾಗಿದೆ. ಈ ಪ್ರಕರಣಗಳು ರಾಂಪುರದ ಸಂಸದ, ಶಾಸಕರ ನ್ಯಾಯಾಲಯದಲ್ಲಿ ನಡೆಯುತ್ತಿವೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!