Sunday, October 12, 2025

ಟ್ರಂಪ್ ಕದನ ವಿರಾಮ ಮಾತಿಗೆ ಡೋಂಟ್ ಕೇರ್: ಇಸ್ರೇಲ್‌ನಿಂದ ಗಾಜಾದ ಮೇಲೆ ಮತ್ತೆ ದಾಳಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಮಾಸ್‌ ಹಾಗೂ ಇಸ್ರೇಲ್‌ ಕದನ ವಿರಾಮದ ಕುರಿತು ಮಾತನಾಡಿ ಕೆಲವೇ ಗಂಟೆಗಳಲ್ಲಿ ಇಸ್ರೇಲ್‌ ಗಾಜಾದ ಮೇಲೆ ದಾಳಿ ನಡೆಸಿದೆ.

ಗಾಜಾ ಪಟ್ಟಿಯಾದ್ಯಂತ ಇಸ್ರೇಲಿ ಪಡೆಗಳು ನಡೆಸಿದ ಗುಂಡಿನ ದಾಳಿಯಲ್ಲಿ ಆರು ಜನರು ಸಾವನ್ನಪ್ಪಿದ್ದಾರೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ.

ಗಾಜಾ ನಗರದ ಮನೆಯೊಂದರಲ್ಲಿ ನಡೆದ ಒಂದು ದಾಳಿಯಲ್ಲಿ ನಾಲ್ವರು ಸಾವನ್ನಪ್ಪಿದರೆ, ದಕ್ಷಿಣದ ಖಾನ್ ಯೂನಿಸ್‌ನಲ್ಲಿ ನಡೆದ ಇನ್ನೊಂದು ದಾಳಿಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ವೈದ್ಯಕೀಯ ಕಾರ್ಯಕರ್ತರು ಮತ್ತು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ.

ಯುದ್ಧವನ್ನು ಕೊನೆಗೊಳಿಸುವ ಅಮೆರಿಕದ ಯೋಜನೆಯಲ್ಲಿ ಒತ್ತೆಯಾಳುಗಳನ್ನು ಬಿಡುಗಡೆ ಮಾಡಲು ಮತ್ತು ಇತರ ಕೆಲವು ಷರತ್ತುಗಳನ್ನು ಹಮಾಸ್ ಒಪ್ಪಿಕೊಂಡ ನಂತರ, ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ ಇಸ್ರೇಲ್‌ಗೆ ಗಾಜಾ ಮೇಲೆ ಬಾಂಬ್ ದಾಳಿ ಮಾಡುವುದನ್ನು ತಕ್ಷಣವೇ ನಿಲ್ಲಿಸುವಂತೆ ಹೇಳಿದ್ದರು. ಆದರೆ ಇದೀಗ ಮತ್ತೆ ದಾಳಿ ಪ್ರಾರಂಭವಾಗಿದೆ.

error: Content is protected !!