6 ಬಾರಿ ಸಮನ್ಸ್ ನೀಡಿದರೂ ಡೋಂಟ್ ಕೇರ್: ಕೇಜ್ರಿವಾಲ್ ವಿರುದ್ಧ ಪ್ರಕರಣ ದಾಖಲಿಸಿದ ED

ಹೊಸದಿಗಂತ ಡಿಜಿಟಲ್ ಡೆಸ್ಕ್:

ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ 6 ಬಾರಿ ಸಮನ್ಸ್ ನೀಡಿದರೂ ವಿಚಾರಣೆಗೆ ಹಾಜರಾಗದ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ವಿರುದ್ಧ ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ಪ್ರಕರಣ ದಾಖಲಿಸಿದ್ದಾರೆ.

ಕೇಜ್ರಿವಾಲ್ ಗೆ ನೀಡಲಾದ ಮೂರು ಸಮನ್ಸ್‌ಗಳನ್ನು ಉದ್ದೇಶಪೂರ್ವಕವಾಗಿ ಪಾಲಿಸದ ಆರೋಪದ ಮೇಲೆ ಐಪಿಸಿಯ ಸೆಕ್ಷನ್ 174ರ ಅಡಿಯಲ್ಲಿ ದೂರು ದಾಖಲಿಸಲಾಗಿದೆ

ಈ ಕುರಿತು ಪ್ರತಿಕ್ರಿಯಿಸಿರುವ ಕೇಜ್ರಿವಾಲ್, ‘ನಾವು ಇ.ಡಿ ಅಧಿಕಾರಿಗಳಿಗೆ ಕಾನೂನಿನ ಪ್ರಕಾರ ಉತ್ತರ ನೀಡುತ್ತಿದ್ದೇವೆ. ಈಗ ಅವರು ಪ್ರಕರಣ ದಾಖಲಿಸಿದ್ದಾರೆ. ಇ.ಡಿ ಯಾವುದೇ ಹೊಸ ಸಮನ್ಸ್ ನೀಡುವ ಮೊದಲು ನ್ಯಾಯಾಲಯದ ತೀರ್ಪಿಗೆ ಕಾಯಬೇಕು’ ಎಂದಿದ್ದಾರೆ.

ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ ಒಟ್ಟು 6 ಬಾರಿ ಸಮನ್ಸ್‌ ಜಾರಿ ಮಾಡಿದ್ದು, ಇದುವರೆಗೆ ಕೇಜ್ರಿವಾಲ್‌ ವಿಚಾರಣೆಗೆ ಹಾಜರಾಗಿಲ್ಲ. ಸಮನ್ಸ್‌ ಅನ್ನು ಕಾನೂನುಬಾಹಿರ ಎಂದು ಕರೆದಿರುವ ಪಕ್ಷ, ಪದೇ ಪದೇ ಸಮನ್ಸ್ ಕಳುಹಿಸುವ ಬದಲು ನ್ಯಾಯಾಲಯದ ವಿಚಾರಣೆ ಮುಗಿಯುವವರೆಗೆ ಕಾಯಬೇಕು ಎಂದು ತಾಕೀತು ಮಾಡಿದೆ‌.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!