ಹೊಸ ದಿಗಂತ ಡಿಜಿಟಲ್ ಡೆಸ್ಕ್:
ತೆಲಂಗಾಣ ಮಾಜಿ ಮುಖ್ಯಮಂತ್ರಿ ಕೆಸಿಆರ್ ಪುತ್ರಿ ಕೆ. ಕವಿತಾ (K Kavitha) ನ್ಯಾಯಾಂಗ ಬಂಧನದ ಅವಧಿಯನ್ನು ಏಪ್ರಿಲ್ 23 ರವರೆಗೆ ವಿಸ್ತರಿಸಲಾಗಿದೆ.
ದೆಹಲಿ ಮದ್ಯ ಹಗರಣ ಪ್ರಕರಣದಲ್ಲಿ ಸೋಮವಾರ ರೋಸ್ ಅವೆನ್ಯೂ ಕೋರ್ಟ್‌ನಲ್ಲಿ (Rose Avenue Court) ನಡೆದ ವಿಚಾರಣೆಯಲ್ಲಿ, ನ್ಯಾಯಾಲಯವು ಈಗಾಗಲೇ ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿತ್ತು. ಅರ್ಜಿಯನ್ನು ತಿರಸ್ಕರಿಸಿದ ವಿಶೇಷ ನ್ಯಾ. ಕಾವೇರಿ ಬವೇಜಾ, ಅವರಿಗೆ ಮಧ್ಯಂತರ ಜಾಮೀನು ನೀಡಲು ಇದು ಸೂಕ್ತ ಸಮಯವಲ್ಲ ಎಂದು ಹೇಳಿದ್ದರು.
ಕವಿತಾ ನಾಲ್ಕು ಪುಟಗಳ ಪತ್ರವನ್ನು ನೀಡಿದ್ದರು. ಪತ್ರದಲ್ಲಿ ಮದ್ಯ ಹಗರಣದಲ್ಲಿ ಭಾಗಿಯಾಗಿಲ್ಲ. ಅಲ್ಲದೇ ಹಗರಣದಿಂದ ನಾನು ಯಾವುದೇ ಪ್ರಯೋಜನಗಳನ್ನು ಪಡೆದಿಲ್ಲ. ಇಡಿ ಮತ್ತು ಸಿಬಿಐ ತನಿಖೆ ಮಾಧ್ಯಮ ವಿಚಾರಣೆಯಾಗಿದೆ ಎಂದು ದೂರಿದ್ದಾರೆ.