ಹೊಸದಿಗಂತ ಡಿಜಿಟಲ್ ಡೆಸ್ಕ್:
ಗೋಲ್ಡರ್ ಸ್ಟಾರ್ ಗಣೇಶ್ ನಾಳೆ ತಮ್ಮ ಜನ್ಮದಿನವನ್ನು ಆಚರಿಸಿಕೊಳ್ಳುತ್ತಿದ್ದು, ಈ ಬಾರಿ ಅಭಿಮಾನಿಗಳನ್ನು ಭೇಟಿ ಮಾಡೋದಕ್ಕೆ ಆಗುತ್ತಿಲ್ಲ ಎಂದು ಹೇಳಿದ್ದಾರೆ.
ನನ್ನ ಆತ್ಮೀಯ ಅಭಿಮಾನಿಗಳೇ, ಜುಲೈ 2ರಂದು ನಾನು ನನ್ನ ಬೆಂಗಳೂರು ನಿವಾಸದಲ್ಲಿ ಲಭ್ಯವಿಲ್ಲ. ಅದೇಕೋ ತಮ್ಮೊಂದಿಗೆ ನನ್ನ ಹುಟ್ಟುಹಬ್ಬ ಆಚರಿಸಿಕೊಳ್ಳಬೇಕೆಂಬ ನನ್ನ ಹಂಬಲ ಈ ಬಾರಿಯೂ ಕೈಗೂಡುತ್ತಿಲ್ಲ. ಹೀಗಾಗಿ ನನ್ನ ಪ್ರೀತಿಯ ಅಭಿಮಾನಿಗಳು ಮನೆಯ ಬಳಿ ಬಾರದೇ ತಾವು ಇದ್ದಲ್ಲಿಂದಲೇ ನನ್ನನ್ನು ಹರಸಿ, ಆಶೀರ್ವದಿಸಿ. ಮುಂದಿನ ವರ್ಷ ಖಂಡಿತ ಒಟ್ಟಿಗೆ ಹುಟ್ಟುಹಬ್ಬ ಆಚರಿಸೋಣ. ಅನಾನುಕೂಲಕ್ಕೆ ಕ್ಷಮೆಯಿರಲಿ. ಎಂದಿನ ತಮ್ಮ ಅಭಿಮಾನದ ನಿರೀಕ್ಷೆಯೊಂದಿಗೆ, ನಿಮ್ಮವ ಗಣೇಶ’ ಎಂದು ಬರೆದುಕೊಂಡಿದ್ದಾರೆ.
View this post on Instagram