ಹೊಸದಿಗಂತ ಡಿಜಿಟಲ್ ಡೆಸ್ಕ್:
ಈ ವರ್ಷ ರಾಜ್ಯದಲ್ಲಿ ಬಿಸಿಲಿನ ತಾಪಮಾನ ಹೆಚ್ಚಾಗುವ ಸಾಧ್ಯತೆಯಿದ್ದು, ಮಧ್ಯಾಹ್ನ 12 ರಿಂದ 3 ರವರೆಗೆ ಮನೆಯಿಂದ ಹೊರಗೆ ಬರಬೇಡಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸೂಚನೆ ನೀಡಿದ್ದಾರೆ.
ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ಈಗಾಗಲೇ ಸೂಚಿಸಿದ್ದೇವೆ. ಸರ್ಕಾರಿ ಕಚೇರಿಗಳ ಕೆಲಸದ ಸಮಯ ಬದಲಾವಣೆಯ ಬಗ್ಗೆ ಸರ್ಕಾರ ತೀರ್ಮಾನ ಮಾಡಿಕೊಳ್ಳಲಿ. ಸರ್ಕಾರಿ ನೌಕರರು ಹೊರಗಡೆ ವೀಕ್ಷಣೆಯನ್ನು ಮಧ್ಯಾಹ್ನ 12 ರಿಂದ 3ರ ವರೆಗೆ ಮಾಡಬಾರದು. ಬೆಳಗಿನ ಜಾವ ಅಥವಾ ಸಾಯಂಕಾಲ ಮಾಡಬೇಕು ಎಂದು ಸಲಹೆ ನೀಡಿದ್ದಾರೆ.