Friday, January 9, 2026

ದೇವರಾಜ ಅರಸ್‌ ಆಡಳಿತಕ್ಕೆ ಸಿದ್ದರಾಮಯ್ಯ ಆಡಳಿತದ ಹೋಲಿಕೆ ಬೇಡ : ಬಿಎಸ್‌ವೈ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ದೇವರಾಜ ಅರಸ್‌ ಆಡಳಿತಕ್ಕೂ ಸಿದ್ದರಾಮಯ್ಯ ಆಡಳಿತಕ್ಕೂ ಹೋಲಿಕೆ ಮಾಡುವುದು ಬೇಡ. ಸಿದ್ದರಾಮಯ್ಯ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ ಅಂತ ಮಾಜಿ ಸಿಎಂ ಯಡಿಯೂರಪ್ಪ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಸಿದ್ದರಾಮಯ್ಯ ದೇವರಾಜ ಅರಸು ದಾಖಲೆ ಮುರಿದ ವಿಚಾರಕ್ಕೆ ಬಿಜೆಪಿ ಕಚೇರಿಯಲ್ಲಿ ಪ್ರತಿಕ್ರಿಯೆ ನೀಡಿದ ಅವರು, ದೇವರಾಜ ಅರಸು ಜೊತೆ ಸಿದ್ದರಾಮಯ್ಯ ಹೋಲಿಕೆ ಸರಿಯಲ್ಲ.

ದೇವರಾಜ ಅರಸು ಆಡಳಿತ ವೈಖರಿ ಬೇರೆ, ಸಿದ್ದರಾಮಯ್ಯ ಆಡಳಿತ ವೈಖರಿ ಬೇರೆ. ಈ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿ ಹೋಗಿದೆ. ಈ ಸಮಯದಲ್ಲಿ ದೊಡ್ಡ ಸಾಧನೆ ಮಾಡಿದ್ದೇನೆ ಎಂದು ತೋರಿಸಿದ್ದನ್ನು ಜನರು ಮೆಚ್ಚೋದಿಲ್ಲ ಅಂತ ಕಿಡಿಕಾರಿದರು.

error: Content is protected !!