ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರು: ವಿಧಾನಸಭೆ ವಿರೋಧ ಪಕ್ಷದ ನಾಯಕನ ಸ್ಥಾನ, ಪಕ್ಷದ ರಾಜ್ಯಾಧ್ಯಕ್ಷರ ಸ್ಥಾನಕ್ಕೆ ನೇಮಕ ಕುರಿತು ಪಕ್ಷದ ನಾಯಕರು ಹೇಳಿಕೆಗಳನ್ನು ನೀಡಿ ಪಕ್ಷದ ಘನತೆಗೆ ಧಕ್ಕೆ ತರಬಾರದು ಎಂದು ಬಿಜೆಪಿ ರಾಜ್ಯಾಧ್ಯಕ್ಷ , ಸಂಸದ ನಳಿನ್‍ಕುಮಾರ್ ಕಟೀಲ್ ಅವರು ಸೂಚಿಸಿದ್ದಾರೆ.
ವಿಪಕ್ಷ ನಾಯಕನ ಸ್ಥಾನ ಮತ್ತಿತರ ಹುದ್ದೆಗೆ ಸಂಬಂಧಿಸಿ ಪಕ್ಷದ ಕೇಂದ್ರ ಸಂಸದೀಯ ಮಂಡಳಿಯು ಸೂಕ್ತ ಸಮಯದಲ್ಲಿ ಸಮರ್ಥ ನಿರ್ಧಾರವನ್ನು ಪ್ರಕಟಿಸಲಿದೆ. ಪಕ್ಷದ ಕೆಲವು ನಾಯಕರು ಈ ನಡುವೆ ಮಾಧ್ಯಮಗಳ ಮುಂದೆ ವಿವಿಧ ಹುದ್ದೆ ಕುರಿತು ಆಕಾಂಕ್ಷೆ ವ್ಯಕ್ತಪಡಿಸುವುದು ಗಮನಕ್ಕೆ ಬಂದಿದೆ. ಅಲ್ಲದೆ, ಪಕ್ಷದ ಸಭೆಗಳಲ್ಲಿ ಈ ವಿಷಯವಾಗಿ ಚರ್ಚಿಸುತ್ತಿರುವುದು ಸರಿಯಲ್ಲ ಎಂದು ಅವರು ತಿಳಿಸಿದ್ದಾರೆ.
ಪಕ್ಷದ ಘನತೆಗೆ ಧಕ್ಕೆ ಉಂಟಾಗದಂತೆ ನಾಯಕರು ನೋಡಿಕೊಳ್ಳಬೇಕು. ಪಕ್ಷದ ಆಂತರಿಕ ವಿಚಾರಗಳನ್ನು ಮಾಧ್ಯಮಗಳ ಮುಂದೆ ಚರ್ಚಿಸುವುದು ಸೂಕ್ತವಲ್ಲ ಎಂದು ಅವರು ಸೂಚಿಸಿದ್ದಾರೆ.