Wednesday, October 29, 2025

ʼಮುಂದಿನ ಸಿಎಂ ವಿಚಾರದಲ್ಲಿ ನನ್ನ ಬಗ್ಗೆ ಚರ್ಚೆ ಬೇಡ, ಯಾರು ಹೇಳಿದ್ದಾರೋ ಅವರನ್ನೇ ಕೇಳಿʼ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ರಾಜ್ಯದಲ್ಲಿ ಮುಂದಿನ ಸಿಎಂ ಯಾರು ಅನ್ನೋ ಚರ್ಚೆ ವಿಚಾರದಲ್ಲಿ ನನ್ನ ಬಗ್ಗೆ ಯಾರೂ ಚರ್ಚೆ ಮಾಡುವ ಅವಶ್ಯಕತೆಯಿಲ್ಲ. ಪಾರ್ಟಿ ಏನು ಹೇಳುತ್ತದೆಯೋ ಅದರಂತೆ ನಾವು ಒಟ್ಟಿಗೆ ಕೆಲಸ ಮಾಡಿಕೊಂಡು ಹೋಗ್ತಿವಿ ಅಂತ ನಾನು ಸಿದ್ದರಾಮಯ್ಯ ಹೇಳಿದ್ದೇವೆ. ಅದಕ್ಕೆ ನಾನು ಬದ್ದನಾಗಿದ್ದೇನೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಮಂತ್ರಾಲಯದಲ್ಲಿ ದೇವಾಲಯಕ್ಕೆ ಭೇಟಿ ಬಳಿಕ ಮಾಧಯಮಗಳ ಜೊತೆ ಅವರು ಮಾತನಾಡಿದರು. ಈ ವೇಳೆ, ಮುಂದಿನ ಮುಖ್ಯಮಂತ್ರಿ ಕುರಿತು ಯತೀಂದ್ರ ಸಿದ್ದರಾಮಯ್ಯ ಹೇಳಿಕೆಗೆ ಅವರು ಪ್ರತಿಕ್ರಿಯಿಸಿದರು. ಅದರ ಬಗ್ಗೆ ಅವರು ಏನು ಹೇಳಿದ್ದಾರೆ ನನಗೆ ಗೊತ್ತಿಲ್ಲ. ಈ ಬಗ್ಗೆ ಅವರನ್ನೇ ಕೇಳಿ. ಅದನ್ನ ನನ್ನ ಕೇಳಿದ್ರೆ ನಾನು ಏನು ಹೇಳಲಿ ಎಂದು ಪ್ರತಿಕ್ರಿಯಿಸಲು ನಿರಾಕರಿಸಿದ್ದಾರೆ.

error: Content is protected !!