ಹೊಸದಿಗಂತ ಡಿಜಿಟಲ್ ಡೆಸ್ಕ್:
SC ಸಮುದಾಯದ 101 ಜಾತಿಗಳಿದ್ದು, ಒಳ ಮೀಸಲಾತಿ ಜಾರಿ ಮಾಡುವಾಗ ಯಾವುದೇ ಜಾತಿಗೆ ಅನ್ಯಾಯ ಆಗದಂತೆ ನಿರ್ಣಯ ತೆಗೆದುಕೊಳ್ಳಿ ಎಂದು ಶಾಸಕ ಬಿವೈ ವಿಜಯೇಂದ್ರ ಆಗ್ರಹಿಸಿದ್ದಾರೆ.
ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನೀವು ರಾಜ್ಯದ ಮುಖ್ಯಮಂತ್ರಿಗಳು. ಒಳ ಮೀಸಲಾತಿ ವಿಚಾರದಲ್ಲಿ ದೃಢ ನಿರ್ಧಾರ ತೆಗೆದುಕೊಳ್ಳಬೇಕು. ಎಸ್‌ಸಿ ಸಮುದಾಯದ 101 ಜಾತಿಗಳಿದ್ದು, ಯಾವುದೇ ಜಾತಿಗೆ ಅನ್ಯಾಯ ಆಗದಂತೆ ನಿರ್ಣಯ ತೆಗೆದುಕೊಳ್ಳಬೇಕು ಎಂದು ತಿಳಿಸಿದ್ದಾರೆ.