ಹೊಸದಿಗಂತ ಡಿಜಿಟಲ್ ಡೆಸ್ಕ್:
ತಿರುಪತಿ ಲಡ್ಡು ವದಂತಿಗಳಿಗೆ ದೇವಸ್ಥಾನದ ಅಧಿಕಾರಿಗಳು ತೆರೆ ಎಳೆದಿದ್ದಾರೆ. ಲಡ್ಡುಗಳನ್ನು ವೈಷ್ಣವ ಬ್ರಾಹ್ಮಣರು ಹಲವು ವರ್ಷಗಳಿಂದ ತಯಾರಿಸುತ್ತಿದ್ದಾರೆ. ಲಡ್ಡುಗಳನ್ನು ಪ್ರತಿದಿನ ಫ್ರೆಶ್ ಆಗಿ ಮಾಡಲಾಗುತ್ತಿರುವುದರಿಂದ ವದಂತಿಗಳಿಗೆ ಕಿವಿಕೊಡಬೇಡಿ ಎಂದು ಆಡಳಿತ ಮಂಡಳಿ ತಿಳಿಸಿದೆ.
ಗುತ್ತಿಗೆದಾರರೊಬ್ಬರ ಮೇಲ್ವಿಚಾರಣೆಯಲ್ಲಿ ಲಡ್ಡುಗಳನ್ನು ತಯಾರಿಸಲಾಗುತ್ತಿದೆ, ಭಕ್ತರಿಗೆ ಹಂಚುವ ಲಡ್ಡುಗಳು ತಾಜಾವಾಗಿಲ್ಲ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹೇಳಿದ್ದಾರೆ.
ಶ್ರೀವಾರಿ ಲಡ್ಡು ಪ್ರಸಾದವನ್ನು ಉತ್ತಮ ಗುಣಮಟ್ಟದಿಂದ ತಯಾರಿಸಲಾಗಿದ್ದು, ಭಕ್ತರು ಸುಳ್ಳು ಸುದ್ದಿಗಳಿಗೆ ಮರುಳಾಗಬಾರದು ಎಂದು ಟಿಟಿಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.
ಸಾಮಾಜಿಕ ಜಾಲತಾಣಗಳಲ್ಲಿ ಶ್ರೀವಾರಿ ಲಡ್ಡು ಬಗ್ಗೆ ಸುಳ್ಳು ಮಾಹಿತಿ ಹರಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಮಂಡಳಿ ತಿಳಿಸಿದೆ.