ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಹಾರಾಷ್ಟ್ರದ ಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿದ್ದು ಕೃಷ್ಣಾ ನದಿ ನೀರಿನ ಪ್ರಮಾಣ ಕ್ಷಣದಿಂದ ಕ್ಷಣಕ್ಕೆ ಏರಿಕೆಯಾಗುತ್ತಿದೆ
ಕೃಷ್ಣಾ ನದಿಗೆ 25 ಸಾವಿರ ಕ್ಯುಸೆಕ್‌ಗಿಂತಲೂ ಹೆಚ್ಚಿನ ಒಳ ಹರಿವು ಇದ್ದು ಹಿಪ್ಪರಗಿ ಜಲಾಶಯದಿಂದ 40 ಸಾವಿರ ಕ್ಯುಸೆಕ್ ನೀರನ್ನು ಹೊರ ಬಿಡಲಾಗಿದೆ.
ಸದ್ಯಕ್ಕೆ ಯಾವುದೇ ಕೆಳ ಹಂತದ ಸೇತುವೆ ಮುಳುಗಡೆಯಾಗಿಲ್ಲ. ನೀರು ಜಾಸ್ತಿ ಆಗುತ್ತಿರುವ ಹಿನ್ನೆಲೆಯಲ್ಲಿ ನದಿ ಪಾತ್ರದ ಜನರು ನದಿಗೆ ಇಳಿಯದಂತೆ ಚಿಕ್ಕೋಡಿ ತಾಲೂಕಾಡಳಿತ ಎಚ್ಚರಿಕೆ ನೀಡಿದೆ.