ಹೊಸದಿಗಂತ ಡಿಜಿಟಲ್ ಡೆಸ್ಕ್:
ಆರೋಗ್ಯ ಸೇವೆಗಳ ಮಹಾನಿರ್ದೇಶನಾಲಯದ ಅಧಿಕಾರಿ ಡಾ ಅತುಲ್ ಗೋಯೆಲ್ ಚೀನಾದಲ್ಲಿ ಪತ್ತೆಯಾದ ಮಾನವ ಮೆಟಾನ್ಯೂಮೋವೈರಸ್ ಹರಡುವ ಬಗ್ಗೆ ಭಯಪಡುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ವೈರಸ್ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ. ಎಲ್ಲಾ ಉಸಿರಾಟದ ಸೋಂಕುಗಳ ವಿರುದ್ಧ ಸಾಮಾನ್ಯ ಮುನ್ನೆಚ್ಚರಿಕೆಗಳನ್ನು ತೆಗೆದುಕೊಂಡರೆ ಸಾಕು ಎಂದು ಸಲಹೆ ನೀಡಿದ್ದಾರೆ.
ದೇಶದಲ್ಲಿ ಉಸಿರಾಟದ ಕಾಯಿಲೆಗಳಿಂದ ಆಸ್ಪತ್ರೆಗೆ ದಾಖಲಾದ ರೋಗಿಗಳ ಡೇಟಾವನ್ನು ನಾವು ವಿಶ್ಲೇಷಿಸಿದ್ದೇವೆ. ಡಿಸೆಂಬರ್ 2024 ಡೇಟಾದಲ್ಲಿ ಯಾವುದೇ ಗಮನಾರ್ಹ ಏರಿಕೆ ಕಂಡುಬಂದಿಲ್ಲ. ನಮ್ಮ ಯಾವುದೇ ಸಂಸ್ಥೆಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಕೇಸ್ ದಾಖಲಾದ ಬಗ್ಗೆ ವರದಿಯಾಗಿಲ್ಲ ಎಂದು ಹೇಳಿದರು.