March 1, 2026
Sunday, March 1, 2026
spot_img

ಎಲ್ಲಾ ನೋಡ್ಕೊಂಡು ಸುಮ್ನಿರಬೇಡಿ: ಖಮೇನಿ ಹತ್ಯೆ ಖಂಡಿಸುವಂತೆ ಇರಾನ್ ಮನವಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಇರಾನ್‌ನ ಪರಮೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿ ಹತ್ಯೆಗೊಂಡಿರುವ ಹಿನ್ನೆಲೆಯಲ್ಲಿ ಭಾರತ ಸೇರಿದಂತೆ ಜಗತ್ತಿನ ಸರ್ಕಾರಗಳು ಸ್ಪಷ್ಟವಾಗಿ ಖಂಡನೆ ವ್ಯಕ್ತಪಡಿಸಬೇಕು ಎಂದು ಭಾರತದಲ್ಲಿರುವ ಇರಾನ್ ರಾಯಭಾರ ಕಚೇರಿ ಆಗ್ರಹಿಸಿದೆ. ಅಮೆರಿಕ ಮತ್ತು ಇಸ್ರೇಲ್ ನಡೆಸಿದ ದಾಳಿಯಲ್ಲಿ ಖಮೇನಿ ಸಾವನ್ನಪ್ಪಿದ್ದಾರೆ ಎಂಬ ವರದಿಯ ಬಳಿಕ ಈ ಮನವಿ ಹೊರಬಿದ್ದಿದೆ.

ಭಾನುವಾರ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ, ಭಾರತದಲ್ಲಿರುವ ಇರಾನ್ ರಾಯಭಾರ ಕಚೇರಿ, ಖಮೇನಿ ನಿಧನಕ್ಕೆ ತೀವ್ರ ದುಃಖ ವ್ಯಕ್ತಪಡಿಸಿದೆ. ಈ ಘಟನೆಯನ್ನು “ಸ್ಪಷ್ಟ ಆಕ್ರಮಣ” ಎಂದು ವರ್ಣಿಸಿ, ಮೌನ ವಹಿಸದೆ ನ್ಯಾಯಬದ್ಧ ನಿಲುವು ತಾಳುವಂತೆ ವಿಶ್ವದ ಸರ್ಕಾರಗಳಿಗೆ ಕರೆ ನೀಡಿದೆ.

ಇದನ್ನೂ ಓದಿ:

ಇದೇ ವೇಳೆ ಇರಾನ್ ಕ್ರಾಂತಿಕಾರಿ ಗಾರ್ಡ್ ಪಡೆ ಪ್ರತೀಕಾರ ತೀರಿಸಿಕೊಳ್ಳುವುದಾಗಿ ಘೋಷಿಸಿದೆ. ಮಧ್ಯಪ್ರಾಚ್ಯದಲ್ಲಿರುವ ಅಮೆರಿಕದ ಸೇನಾ ನೆಲೆಗಳ ಮೇಲೆ ಪ್ರತಿದಾಳಿ ಆರಂಭಿಸಿರುವುದಾಗಿ ರಾಜ್ಯ ಮಾಧ್ಯಮ ವರದಿ ಮಾಡಿದೆ.

ಅಮೆರಿಕ ಮತ್ತು ಇಸ್ರೇಲ್ ತಮ್ಮ ಕೃತ್ಯದ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಹೇಳಿಕೆಯಲ್ಲಿ ಎಚ್ಚರಿಕೆ ನೀಡಲಾಗಿದೆ. ದೇಶದ ಆಂತರಿಕ ವ್ಯವಸ್ಥೆ ಮತ್ತು ಆಡಳಿತದಲ್ಲಿ ಯಾವುದೇ ವ್ಯತ್ಯಯ ಉಂಟಾಗಲು ಅವಕಾಶ ನೀಡುವುದಿಲ್ಲವೆಂದು ರಾಯಭಾರ ಕಚೇರಿ ಸ್ಪಷ್ಟಪಡಿಸಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !