ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೋಗಿಲು ಒತ್ತುವರಿ ತೆರವು ಕಾರ್ಯಾಚರಣೆಯನ್ನು ವಿರೋಧಿಸಿ ಕೇರಳ ಸಿಎಂ ಮಾಡಿರುವ ಟ್ವೀಟ್ ಸಂಪೂರ್ಣವಾಗಿ ರಾಜಕೀಯ ಪ್ರೇರಿತ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಟೀಕಿಸಿದ್ದಾರೆ.
ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಜಯ ದಾಖಲಿಸಿದೆ. ಇದರಿಂದ ಕಂಗೆಟ್ಟಿರುವ ಪಿಣರಾಯಿ ವಿಜಯನ್, ಜನರ ದಾರಿ ತಪ್ಪಿಸಲು ಇಂತಹ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಒಬ್ಬ ಜವಾಬ್ದಾರಿಯುತ ಮುಖ್ಯಮಂತ್ರಿ ಇಂತಹ ಸುಳ್ಳು ಸುದ್ದಿಗಳನ್ನು ಹರಡುವುದು ಅವರ ಸ್ಥಾನಕ್ಕೆ ಶೋಭೆ ತರುವುದಿಲ್ಲ. ಅವರು ಕೂಡಲೇ ತಮ್ಮ ಹೇಳಿಕೆಯನ್ನು ವಾಪಸ್ ಪಡೆಯಬೇಕು ಎಂದರು.
ಕಾಂಗ್ರೆಸ್ ಸರ್ಕಾರವು ಎಲ್ಲ ಧರ್ಮ, ಜಾತಿಯವರನ್ನು ಸಮಾನವಾಗಿ ಕಾಣುತ್ತದೆ. ಒತ್ತುವರಿ ತೆರವು ವೇಳೆ ಯಾರಿಗೂ ಅನ್ಯಾಯವಾಗದಂತೆ ಪರ್ಯಾಯ ವ್ಯವಸ್ಥೆ ಕಲ್ಪಿಸಲು ಸಿಎಂ ಸಿದ್ದರಾಮಯ್ಯ ಈಗಾಗಲೇ ಸೂಚಿಸಿದ್ದಾರೆ ಎಂದು ತಿಳಿಸಿದ್ದಾರೆ.

