March 17, 2026
Tuesday, March 17, 2026
spot_img

ಮನ್ರೇಗಾ ಹೆಸರು ಬದಲಾವಣೆ ಇಷ್ಟವಿಲ್ಲ! ಕಾಂಗ್ರೆಸ್‌ನಿಂದ ನಾಳೆ ರಾಜಭವನ ಚಲೋ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಮನ್ರೇಗಾ ಹೆಸರು ಬದಲಾವಣೆ ವಿರೋಧಿಸಿ ನಾಳೆ ಕಾಂಗ್ರೆಸ್​ನಿಂದ ರಾಜಭವನ ಚಲೋ ನಡೆಸಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೋಮವಾರ ತಿಳಿಸಿದರು.

ಮನ್ರೇಗಾ ಕುರಿತು ಜನರಲ್ಲಿ ಅರಿವು ಮೂಡಿಸುವ ಕೆಲಸ ಮಾಡುತ್ತಿದ್ದು, ಮಂಗಳವಾರ ಫ್ರೀಡಂಪಾರ್ಕ್​​ನಿಂದ ರಾಜಭವನದತ್ತ ನಡೆಯುವ ಈ ಪ್ರತಿಭಟನೆಯಲ್ಲಿ ರಾಜ್ಯಾದ್ಯಂತ ಎಲ್ಲ ಶಾಸಕರು, ಎಂಎಲ್​ಸಿಗಳು ಹಾಗೂ ನರೇಗಾ ಕಾರ್ಯಕರ್ತರು ಭಾಗವಹಿಸುತ್ತಿದ್ದಾರೆ ಎಂದರು. ಈ ಕಾರ್ಯಕ್ರಮದ ಜತೆಗೆ ಪ್ರತಿ ಕ್ಷೇತ್ರದಲ್ಲೂ ಪ್ರತಿಭಟನೆ ನಡೆಸಲಾಗುತ್ತಿದ್ದು, ರನ್ ಫರ್ ಮನ್ರೇಗಾ ಅಂತ ಕನಿಷ್ಠ 5 ಕಿಲೋಮೀಟರ್ ಪಾದಯಾತ್ರೆ ಮಾಡುತ್ತಿದ್ದೇವೆ ಎಂದು ಅವರು ತಿಳಿಸಿದರು.

ಇದೇ ವೇಳೆ ದೆಹಲಿ ಗಣರಾಜ್ಯೋತ್ಸ ಕಾರ್ಯಕ್ರಮದಲ್ಲಿ ರಾಜ್ಯದ ಸ್ತಬ್ಧಚಿತ್ರಕ್ಕೆ ಕೋಕ್ ವಿಚಾರ ಕುರಿತು ಪ್ರತಿಕ್ರಿಯಿಸಿದ ಡಿಕೆ ಶಿವಕುಮಾರ್, ಕರ್ನಾಟಕದ ಸ್ತಬ್ಧಚಿತ್ರಕ್ಕೆ ಅವಕಾಶ ಕೊಡಲಿಲ್ಲ ಅಂದ್ರೆ ಸೆಂಟ್ರಲ್ ಮಿನಿಸ್ಟರ್ ಗಳು ಅದಕ್ಕೆ ಉತ್ತರ ಕೊಡಬೇಕು. ಹಾಗಾದ್ರೆ ಅವರು ಎಷ್ಟು ಶಕ್ತಿಶಾಲಿಗಳಿದ್ದಾರೆ ಅಂತ ತಿಳಿಸಕೊಳ್ಳಬೇಕು. ಅವರೇ ಇದಕ್ಕೆ ಉತ್ತರ ಕೊಡಬೇಕು, ನಾನೇನು ಟೀಕೆ ಮಾಡಲ್ಲ. ಕುಮಾರಸ್ವಾಮಿ, ಪ್ರಹ್ಲಾದ್ ಜೋಶಿ, ಶೋಭಾಕರಂದ್ಲಾಜೆ, ನಿರ್ಮಲಾ ಸೀತಾರಾಮನ್ ಇದಕ್ಕೆ ಉತ್ತರ ಕೊಡಲಿ ಎಂದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !