ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Tuesday, June 22, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ವದಂತಿಗಳಿಗೆ ಕಿವಿಗೊಡಬೇಡಿ, ಪ್ರತಿಯೊಬ್ಬರಿಗೂ ಲಸಿಕೆ ನೀಡುತ್ತೇವೆ: ಶಾಸಕ ಕಾಮತ್

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………….

ಹೊಸ ದಿಗಂತ ವರದಿ, ಮಂಗಳೂರು:

ಪ್ರತಿಯೊಬ್ಬರಿಗೂ ಕೂಡ ಲಸಿಕೆ ನೀಡುವ ಜವಾಬ್ದಾರಿ ಸರಕಾರದ, ಜಿಲ್ಲಾಡಳಿತದ ಮೇಲಿದೆ. ವದಂತಿಗಳಿಗೆ ಕಿವಿಗೊಡಬೇಡಿ, ಹಂತ ಹಂತವಾಗಿ ಎಲ್ಲರಿಗೂ ಲಸಿಕೆ ನೀಡುತ್ತೇವೆ ಎಂದು ಶಾಸಕ ವೇದವ್ಯಾಸ್ ಕಾಮತ್ ಹೇಳಿದ್ದಾರೆ.
ಪ್ರಥಮ ಹಂತದ ಕೋವಿಶೀಲ್ಡ್ ಲಸಿಕೆ ಪಡೆದವರಿಗೆ ೮೪ ದಿನಗಳ ನಂತರ ಎರಡನೇ ಹಂತದ ಲಸಿಕೆ ನೀಡಲಾಗುತ್ತದೆ. ಲಸಿಕೆ ನೀಡುವ ಒಂದು ದಿನ ಮೊದಲು ಎಸ್.ಎಂ.ಎಸ್ ಅಥವಾ ಕರೆ ಮಾಡಿ ಮಾಹಿತಿ ನೀಡಲಾಗುತ್ತದೆ. ಯಾವುದೇ ಕಾರಣಕ್ಕೂ ಗಾಬರಿಪಡಬೇಕಿಲ್ಲ ಎಂದು ಶಾಸಕರು ತಿಳಿಸಿದ್ದಾರೆ.
ಪ್ರಾರಂಭದ ದಿನಗಳಲ್ಲಿ ಲಸಿಕೆಯ ಕುರಿತು ಬಿಜೆಪಿಯ ವ್ಯಾಕ್ಸಿನ್ ಎಂದು ಉದ್ದೇಶಪೂರ್ವಕವಾಗಿ ಅಪಪ್ರಚಾರ ಮಾಡಿದ ಕಾಂಗ್ರೇಸ್ ಮುಖಂಡರು ಇಂದು ಲಸಿಕೆ ಸಿಗುತ್ತಿಲ್ಲ ಎಂದು ಅಪಪ್ರಚಾರ ಮಾಡುತ್ತಿದ್ದಾರೆ. ಬೇರೆ ಬೇರೆ ರೀತಿಯಲ್ಲಿ ಜನರಲ್ಲಿ ಭೀತಿ ಹುಟ್ಟಿಸಿ ಜನರು ಲಸಿಕೆ ಪಡೆಯಲು ಬಾರದಂತೆ ಮಾಡಿದ ಕಾಂಗ್ರೆಸ್ ಮುಖಂಡರು ಇಂದು ಲಸಿಕೆ ಪಡೆಯುತಿದ್ದಾರೆ ಎಂದು ಕಾಮತ್ ಹೇಳಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss