ಸ್ಕ್ರಿಪ್ಟ್ ಕೇಳೋದೇ ಇಲ್ಲ, ಪೇಮೆಂಟ್ ಮುಖ್ಯ: ನಟ ಶಿವರಾಜ್ ಕುಮಾರ್ ವಿರುದ್ಧ ಪ್ರಶಾಂತ್ ಸಂಬರಗಿ ಪೋಸ್ಟ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ನಟ ಶಿವರಾಜ್ ಕುಮಾರ್ ಕುರಿತು ಪ್ರಶಾಂತ್ ಸಂಬರಗಿ ಫೇಸ್ ಬುಕ್ ನಲ್ಲಿ ಬರೆದುಕೊಂಡಿದ್ದು, ಇದೀಗ ಎಲ್ಲರ ಕೆಂಗಣ್ಣಿಗೆ ಕಾರಣವಾಗಿದೆ.

ಶಿವಣ್ಣ ಯಾವತ್ತೂ ಸ್ಕ್ರಿಪ್ಟ್ ಕೇಳೋದೇ ಇಲ್ಲ. ಆದರೆ, ಪೇಮೆಂಟ್ ತುಂಬಾನೇ ಮುಖ್ಯ. ಒಪ್ಪಿಕೊಂಡಿದ್ದ ಸಿನಿಮಾ ಮಾಡ್ತಾರೆ. ತುಂಬಾ ಎಮೋಷನಲ್ ಜೀವಿ ನಮ್ಮ ಶಿವಣ್ಣ.
ಸಿನಿಮಾ ಫ್ಲಾಪ್ ಆದರೂ, ಅವರು ಕೇರ್ ಮಾಡಲ್ಲ. ಮತ್ತೆ ಪೇಮೆಂಟ್ ತಗೊಂಡು ಇನ್ನೊಂದು ಫಿಲ್ಮ್ ಗೆ ಸೈನ್ ಮಾಡ್ಬಿಡ್ತಾರೆ. ಅದೇ ಫಾರ್ಮುಲಾ ರಾಜಕೀಯದಲ್ಲೂ ಅನುಸರಿಸಿದ್ದಾರೆ. ಕ್ಯಾಂಡಿಡೇಟ್ ಗೆದ್ರೆ ಏನು ಸೋತ್ರೆ ಏನು ಎಲ್ಲಾ ಒಂದೇ. ಏನೋ ಹೇಳ್ತಾರಲ್ಲ ಗೆದ್ದರೆ ಬೆಟ್ಟ. ಇಲ್ಲ ಅಂದ್ರೆ.. ಬಂತಾ ಪ್ಯಾಕೆಟ್.. ಸರಿ ಆಲ್ ರೈಟ್ ಮುಂದೆ ಹೋಗೋಣ’ ಎಂದು ಬರೆದುಕೊಂಡಿಡಿದ್ದಾರೆ.
ಇದೀಗ ಈ ಮಾತಿಗೆ ಎಲ್ಲಡೆ ಅಸಮಾಧಾನ ವ್ಯಕ್ತವಾಗುತ್ತಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!