ಹೊಸದಿಗಂತ ಡಿಜಿಟಲ್ ಡೆಸ್ಕ್:
ನಮ್ಮ ಮೇಲೆ ದಾಳಿ ಮಾಡಿ ಇಸ್ರೇಲ್ ದೊಡ್ಡ ತಪ್ಪು ಮಾಡಿದೆ. ಈ ತಪ್ಪಿಗೆ ಶಿಕ್ಷೆ ಅನುಭವಿಸಲೇಬೇಕು ಎಂದು ಇರಾನ್ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ವಾರ್ನಿಂಗ್ ನೀಡಿದ್ದಾರೆ.
ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಿದ ಖಮೇನಿ, ಹುತಾತ್ಮರ ಬಲಿದಾನವನ್ನು ವ್ಯರ್ಥ ಮಾಡಲು ಬಿಡುವುದಿಲ್ಲ. ಇರಾನ್ ಮೇಲೆ ದಾಳಿ ಮಾಡಿದ ಇಸ್ರೇಲ್‌ಗೆ ಶಿಕ್ಷೆ ಖಚಿತ. ಇಸ್ರೇಲ್‌ಗೆ ಅಮೆರಿಕ ಶಸ್ತ್ರಾಸ್ತ್ರಗಳ ನೆರವು ನೀಡಬಾರದು. ನೆರವು ನೀಡಿದ್ದಲ್ಲಿ ಸರಿಪಡಿಸಲಾಗದ ಹಾನಿ ಉಂಟಾಗಲಿದೆ ಎಂದು ಖಮೇನಿ ಪ್ರತಿಜ್ಞೆ ಮಾಡಿದ್ದಾರೆ.