ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Saturday, July 31, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಸಲ್ಮಾನ್​ ಖಾನ್​ ವಿರುದ್ಧ ಯಾವುದೇ ಹೇಳಿಕೆ ನೀಡಬೇಡಿ: ಕಮಾಲ್ ಆರ್​ ಖಾನ್​ಗೆ ಮುಂಬೈ ಕೋರ್ಟ್​​ ಆದೇಶ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
……………………………………

ಹೊಸದಿಗಂತ ಆನ್ ಲೈನ್ ಡೆಸ್ಕ್:

ಯಾವುದೇ ರೀತಿಯ ಮಾನಹಾನಿ ಆಗುವಂತಹ ವಿಚಾರಗಳನ್ನು ಸಲ್ಮಾನ್​ ಖಾನ್​ ವಿರುದ್ಧ ಪೋಸ್ಟ್​ ಮಾಡದಂತೆ ನಟ, ಸಿನಿಮಾ ವಿಮರ್ಶಕ ಕಮಾಲ್ ಆರ್​ ಖಾನ್​ಗೆ ಮುಂಬೈ ಕೋರ್ಟ್​​ ಆದೇಶ ನೀಡಿದೆ.
ಹಲವು ದಿನಗಳಿಂದ ಸಲ್ಮಾನ್ ಖಾನ್ ಅವರ ಮೇಲೆ ಕಮಾಲ್ ಖಾನ್ ಅವರು ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತ ಬಂದಿದ್ದು, ಸಲ್ಮಾನ್ ಖಾನ್ ಭ್ರಷ್ಟಾಚಾರಿ. ಅವರ ಬೀಯಿಂಗ್ ಹ್ಯೂಮನ್ ಬ್ರಾಂಡ್ ಮೂಲಕ ಮೋಸ ಮಾಡಲಾಗುತ್ತಿದೆ. ಮನಿ ಲಾಂಡರಿಂಗ್ ಮಾಡಲಾಗುತ್ತಿದೆ. ಸಲ್ಮಾನ್ ಖಾನ್ ಸಿನಿಮಾ ನಿರ್ಮಾಣ ಸಂಸ್ಥೆಯಲ್ಲಿ ದರೋಡೆಕೋರರು ಇದ್ದಾರೆ ಎಂದೆಲ್ಲ ಕಮಾಲ್ ಖಾನ್ ಮಾತನಾಡಿದ್ದರು. ಈ ಕಾರಣಕ್ಕೆ ಕಮಾಲ್​ ವಿರುದ್ಧ ಸಲ್ಲು ಮಾನನಷ್ಟ ಮೊಕದ್ದಮೆ ಹೂಡಿದ್ದರು.
ಈ ಅರ್ಜಿ ವಿಚಾರಣೆ ನಡೆಸಿದ ಮುಂಬೈ ಸಿವಿಲ್​ ಕೋರ್ಟ್​, ನೇರವಾಗಿ ಅಥವಾ ಪರೋಕ್ಷವಾಗಿ ಸಲ್ಮಾನ್​ ವಿರುದ್ಧ ಅಥವಾ ಅವರಿಗೆ ಸಂಬಂಧಿಸಿದ ಉದ್ಯಮ, ಸಂಸ್ಥೆ ಬಗ್ಗೆ ಕಮಾಲ್ ​ ಆರೋಪ ಮಾಡುವಂತಿಲ್ಲ. ಖ್ಯಾತಿ ಅನ್ನೋದನ್ನು ಯಾರೂ ಹಾಳು ಮಾಡಬಾರದು ಎಂದು ಹೇಳಿದೆ.
ತಾವು ರಾಧೆ ಸಿನಿಮಾವನ್ನು ನಿಷ್ಠುರವಾಗಿ ವಿಮರ್ಶೆ ಮಾಡಿದ್ದಕ್ಕಾಗಿಯೇ ಸಲ್ಮಾನ್ ಖಾನ್ ಅವರು ತಮ್ಮ ಮೇಲೆ ಮಾನನಷ್ಟ ಮೊಕದ್ದಮೆ ಹಾಕಿದ್ದಾರೆ ಎಂದು ಕಮಾಲ್ ಖಾನ್ ಅವರು ಸೋಶಿಯಲ್ ಮೀಡಿಯಾದಲ್ಲಿ ಹೇಳಿಕೊಂಡಿದ್ದರು. ಒಟ್ಟಿನಲ್ಲಿ ರಾಧೆ ಸಿನಿಮಾವನ್ನು ವಿಮರ್ಶೆ ಮಾಡಿದ್ದಕ್ಕೂ ಈ ಮಾನನಷ್ಟ ಮೊಕದ್ದಮೆಗೂ ಯಾವುದೇ ಸಂಬಂಧ ಇಲ್ಲ ಎಂಬುದು ಬಯಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss