ಹೊಸದಿಗಂತ ಡಿಜಿಟಲ್ ಡೆಸ್ಕ್ :
ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಟಿಕೆಟ್ ಸಿಗದಿದ್ದಕ್ಕೆ ಬೇಸರಗೊಂಡು ಬಿಜೆಪಿಗೆ ರಾಜೀನಾಮೆ ನೀಡುವುದಾಗಿ ಹೇಳಿದ್ದಾರೆ. ಇದಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ಲಕ್ಷ್ಮಣ ಸವದಿಯವರ ಜೊತೆ ನಾನು ಈಗಾಗಲೇ ಮಾತನಾಡಿದ್ದೇವೆ. ಯಾವುದೇ ದುಡುಕಿನ ನಿರ್ಧಾರ ತೆಗೆದುಕೊಳ್ಳದಂತೆ ಹೇಳಿದ್ದೇನೆ. ಅವರಿಗೆ ಪಕ್ಷದಲ್ಲಿ ಮುಂದೆ ಒಳ್ಳೆಯ ಭವಿಷ್ಯವಿದೆ ಎಂದು ಸಿಎಂ ಮಾತನಾಡಿದ್ದಾರೆ.
ಸವದಿಯವರಿಗೆ ಟಿಕೆಟ್ ಸಿಗದಿದ್ದಕ್ಕೆ ಬೇಸರಗೊಂಡಿದ್ದಾರೆ. ಈ ಬೇಸರದಲ್ಲಿ ಕೆಲವೊಂದು ವಿಚಾರ ಹೇಳಿರಬಹುದು. ಆದರೆ ಎಲ್ಲವೂ ಸರಿಹೋಗಲಿದೆ. ನನಗೆ ವಿಶ್ವಾಸವಿದೆ, ಅವರಿಗೆ ಇದೇ ಪಕ್ಷದಲ್ಲಿ ಉತ್ತಮ ಭವಿಷ್ಯವಿದೆ. ಸವದಿ ಬಿಜೆಪಿಯಲ್ಲೇ ಇರಲಿದ್ದಾರೆ ಎಂಬ ವಿಶ್ವಾಸವನ್ನು ಬೊಮ್ಮಾಯಿ ವ್ಯಕ್ತಪಡಿಸಿದ್ದಾರೆ.