ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಿಎಂ ಹೆಸರು ದುರ್ಬಳಕೆ ಮಾಡಿಕೊಳ್ಳೋದು ಬೇಡ ಎಂಬ ಡಿ.ಕೆ ಶಿವಕುಮಾರ್ ಹೇಳಿಕೆಗೆ ಸಚಿವ ಕೆ.ಎನ್ ರಾಜಣ್ಣ ತಿರುಗೇಟು ನೀಡಿದ್ದಾರೆ. ಸಿಎಂ ಹೆಸರು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಅನ್ನೋದು ಹೇಳಿಕೆ ಅಷ್ಟೇ, ಎಚ್ಚರಿಕೆ ಗಿಚ್ಚರಿಕೆ ಎಲ್ಲಾ ನಡೆಯಲ್ಲ, ಎಂದು ಟಾಂಗ್ ಕೊಟ್ಟಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿ. ನಾವು ಯಾರ ಹೆಸರನ್ನು ದುರ್ಬಳಕೆ ಮಾಡಿಕೊಂಡಿಲ್ಲ. ಅವರು ಎಐಸಿಸಿ ಹೆಸರನ್ನ ದುರ್ಬಳಕೆ ಮಾಡಿಕೊಳ್ಳುವುದು ಬೇಡ. ಎಲ್ಲದಕ್ಕೂ ಎಐಸಿಸಿ ಹೇಳಿದೆ ಎಂದು ಎಐಸಿಸಿ ಹೆಸರನ್ನ ಅವರು ದುರ್ಬಳಕೆ ಮಾಡಿಕೊಳ್ಳಬಾರದು. ಇದು ಆರೋಪ ಅಲ್ಲ ವಾಸ್ತವ. ನಾನು ಯಾರಿಂದಲೂ ಶಿಸ್ತಿನ ಪಾಠ ಮಾಡಿಸಿಕೊಳ್ಳಬೇಕಿಲ್ಲ ಎಂದು ಗುಡುಗಿದ್ದಾರೆ.