Saturday, August 13, 2022

Latest Posts

ನನ್ನ ಬಗ್ಗೆ ಅನುಕಂಪ ಬೇಡ, ಅವರ ಪಕ್ಷ ನೋಡಿಕೊಳ್ಳಲಿ: ಡಿ.ಕೆ. ಶಿವಕುಮಾರ್ ಗೆ ತಿರುಗೇಟು ಕೊಟ್ಟ ಯಡಿಯೂರಪ್ಪ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಯಡಿಯೂರಪ್ಪ ಮಾನಸಿಕವಾಗಿ ಕುಗ್ಗಿದ್ದಾರೆ ಎಂದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿಕೆಗೆ ಯಡಿಯೂರಪ್ಪ ತಿರುಗೇಟು ನೀಡಿದ್ದಾರೆ.
ನಾನು ನಾಲ್ಕು ಬಾರಿ ಮುಖ್ಯಮಂತ್ರಿ ಆಗಲು ಬಿಜೆಪಿ ಅವಕಾಶ ಮಾಡಿಕೊಟ್ಟಿದೆ.ನನ್ನ ಬಗ್ಗೆ ಡಿ.ಕೆ. ಶಿವಕುಮಾರ್ ಗೆ ಅನುಕಂಪ ಬೇಡ. ಅವರ ಪಕ್ಷವನ್ನು ನೋಡಿಕೊಳ್ಳಲಿ. ಯಡಿಯೂರಪ್ಪನವರನ್ನು ಸೈಡ್ ಲೈನ್ ಮಾಡಿದ್ದಾರೆ ಎಂಬ ಪ್ರಶ್ನೆಯೇ ಇಲ್ಲ. ಯಾವುದೇ ಅಧಿಕಾರ ಇಲ್ಲದಿದ್ದರೂ ಕೆಲಸ ಮಾಡಿ ತೋರಿಸುತ್ತೇನೆ. ರಾಜ್ಯಾದ್ಯಂತ ಪ್ರವಾಸ ಮಾಡಿ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರುತ್ತೇವೆ ಎಂದು ಯಡಿಯೂರಪ್ಪ ಹೇಳಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss