ಪ್ರತಿಯೊಂದು ವಿಷಯವನ್ನೂ ರಾಜಕೀಯಗೊಳಿಸಬೇಡಿ: ರಾಹುಲ್‌ಗೆ ನಿರ್ಮಲಾ ಸೀತಾರಾಮನ್ ಕಿವಿಮಾತು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ಟಾಟಾ ಸಂಸ್ಥೆಗೆ ಸಂಬಂಧಿಸಿದ ಆಂತರಿಕ ಮತ್ತು ಕಾನೂನು ವಿಷಯಗಳನ್ನು ರಾಜಕೀಯಗೊಳಿಸುತ್ತಿದ್ದಾರೆ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಕೇಂದ್ರ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವೆ ನಿರ್ಮಲಾ ಸೀತಾರಾಮನ್ ಬುಧವಾರ ತೀವ್ರ ವಾಗ್ದಾಳಿ ನಡೆಸಿದ್ದಾರೆ. ವಾಣಿಜ್ಯ ಮತ್ತು ಕಾನೂನು ವಿಷಯಗಳ ಬಗ್ಗೆ ಆಧಾರರಹಿತ ಆರೋಪಗಳನ್ನು ಮಾಡುವ ಬದಲು ರಚನಾತ್ಮಕವಾಗಿ ತೊಡಗಿಸಿಕೊಳ್ಳುವಂತೆ ಅವರು ರಾಹುಲ್ ಗಾಂಧಿಗೆ ಕಿವಿಮಾತು ಹೇಳಿದ್ದಾರೆ. ರಾಹುಲ್ ಗಾಂಧಿ ಮಾಡಿದ ಆರೋಪಗಳು ಟಾಟಾ ಸನ್ಸ್‌ನ ಕಾರ್ಯಕಾರಿ ಅಧ್ಯಕ್ಷರಾಗಿ … Continue reading ಪ್ರತಿಯೊಂದು ವಿಷಯವನ್ನೂ ರಾಜಕೀಯಗೊಳಿಸಬೇಡಿ: ರಾಹುಲ್‌ಗೆ ನಿರ್ಮಲಾ ಸೀತಾರಾಮನ್ ಕಿವಿಮಾತು