ಹೊಸದಿಗಂತ ಡಿಜಿಟಲ್ ಡೆಸ್ಕ್:
ಸರ್ಕಾರದ ಎಲ್ಲಾ ಇಲಾಖೆಗಳ ಆಡಳಿತದಲ್ಲಿ ಕಡ್ಡಾಯವಾಗಿ ಪೂರ್ಣ ಪ್ರಮಾಣದಲ್ಲಿ ಕನ್ನಡ ಬಳಕೆ ಮಾಡಬೇಕು. ಸೂಚನೆ ಪಾಲಿಸದವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ರಾಜ್ಯ ಸರ್ಕಾರ ಆದೇಶಿಸಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆ ಹಿನ್ನೆಲೆಯಲ್ಲಿ ಸರ್ಕಾರದ ಮುಖ್ಯ ಕಾವ್ಯದರ್ಶಿ ಡಾ.ಶಾಲಿನಿ ರಜನೀಶ್ ಅವರು ಸುತ್ತೋಲೆ ಹೊರಡಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಆಡಳಿತ ನಡೆಸುವಂತೆ ಹಲವು ಬಾರಿ ಸುತ್ತೋಲೆ ಹೊರಡಿಸಿ ಸೂಚಿಸಿದ್ದರೂ ಪಾಲನೆಯಾಗುತ್ತಿಲ್ಲ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರು ವರದಿ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಎಲ್ಲಾ ಇಲಾಖೆಗಳು ಆಡಳಿತದಲ್ಲಿ ಸಂಪೂರ್ಣ ಕನ್ನಡ ಬಳಕೆ ನಿಯಮ ಪಾಲಿಸಬೇಕು ಎಂದು ತಿಳಿಸಿದ್ದಾರೆ.
ಸರ್ಕಾರಿ ಕಚೇರಿಗಳ ನಾಮಫಲಕಗಳನ್ನು ಕನ್ನಡ ದಲ್ಲಿಯೇ ಪ್ರದರ್ಶಿಸಬೇಕು. ಈ ಸೂಚನೆ ಉಲ್ಲಂಘಿಸಿದವರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಸುತ್ತೋಲೆಯಲ್ಲಿ ತಿಳಿಸಿದ್ದಾರೆ.