ಹೊಸದಿಗಂತ ಡಿಜಿಟಲ್ ಡೆಸ್ಕ್:
ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಡಿ.ಕೆ.ಸುರೇಶ್ ಸೋತಿದ್ದು, ಈ ಹಿನ್ನೆಲೆಯಲ್ಲಿ ನಡೆದ ಆತ್ಮಾವಲೋಕನ ಸಭೆಯಲ್ಲಿ ಮಾಜಿ ಸಂಸದ ಭಾವುಕರಾದರು.
ಕನಕಪುರದ ಡಿ.ಕೆ.ಶಿವಕುಮಾರ್ ನಿವಾಸದಲ್ಲಿ ಭಾನುವಾರ ಸಂಜೆ ನಡೆದ ಸಭೆಯನ್ನುದ್ದೇಶಿಸಿ ಮಾತನಾಡಿ, ಡಿ.ಕೆ.ಸುರೇಶ್ ತಮ್ಮ ಅಳಲು ತೋಡಿಕೊಂಡರು.
ನಾವು ಸೋತಿದ್ದೇವೆ ಎಂದು ಸುಮ್ಮನೆ ಕೂರುವುದಿಲ್ಲ. ನಿಮ್ಮೆಲ್ಲರಿಗೂ ಒಂದು ಕೊರಗಿತ್ತು. ನಿಮ್ಮ ಮನೆಗೆ ಬರಲ್ಲ ಅಂತಿದ್ರೀ, ಇನ್ಮುಂದೆ ನಿಮ್ಮ ಮನೆಗೂ ಬರ್ತಿನಿ, ನಿಮ್ಮ ಬೀದಿಗೂ ಬರ್ತಿನಿ. ನಾನು ನಿಮ್ಮೊಂದಿಗೆ ಕೆಲಸ ಕಾರ್ಯಗಳನ್ನು ಮಾಡುತ್ತೇನೆ ಎಂದು ಭಾವುಕ ಮಾತಗಳನ್ನು ವ್ಯಕ್ತಪಡಿಸಿದ್ದಾರೆ. .
ಇನ್ನೇನು ನಿಮಿಂದಲೇ ಸಾಧ್ಯ ಜನ ಪರ ಕೆಲಸ ಮಾಡೋಕೆ