ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾಂಗ್ರೆಸ್ ನವ್ರು ದೇಶದ ರೈತರ ಸಾಲಮನ್ನಾ ಮಾಡ್ತಿವಿ ಅಂತ ಪ್ರಣಾಳಿಕೆಯಲ್ಲಿ ಹೇಳಿದ್ದಾರೆ. ನಮ್ಮ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವೇ ಇದೇ ಅವ್ರಿಗೆ ದಮ್ಮಿದ್ರೆ ಮೊದ್ಲು ರಾಜ್ಯದ ರೈತರ ಸಾಲಮನ್ನಾ ಮಾಡ್ಲಿ ಎಂದು ಮಾಜಿ ಸಚಿವ ಬಂಡೆಪ್ಪ ಖಾಶೆಂಪುರ್ ಸವಾಲು ಹಾಕಿದ್ದಾರೆ.
ಬೀದರ್ ಲೋಕಸಭಾ ಕ್ಷೇತ್ರದ ಎನ್.ಡಿ.ಎ ಅಭ್ಯರ್ಥಿಯಾಗಿರುವ ಕೇಂದ್ರ ಸಚಿವ ಭಗವಂತ ಖೂಬಾರವರ ಪರವಾಗಿ ಪ್ರಚಾರ ಮಾಡುವ ವೇಳೆ ಮಾತನಾಡಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವಿದೆ. ಅವರು ರೈತರ ಸಾಲಮನ್ನಾ ಮಾಡ್ಲಿ. ಉದ್ರಿ ಮಾತು ಬೇಡ ನಗದಿ ಕೆಲಸ ಮಾಡಲಿ ಎಂದರು.
ಈ ಹಿಂದೆ ಅಧಿಕಾರದಲ್ಲಿ ಇದ್ದಾಗಲೆಲ್ಲಾ ಕುಮಾರಸ್ವಾಮಿರವರು ರೈತರ ಸಾಲಮನ್ನಾ ಮಾಡಿದ್ದರು. ಅವರು ಉದ್ರಿ ಮಾತು ಯಾವತ್ತೂ ಕೂಡ ಹೇಳಿಲ್ಲ. ನಗದಿ ಕೆಲಸವನ್ನು ಮಾಡಿದ್ದಾರೆ ಎಂದು ಹೇಳಿದ್ದಾರೆ.