ಹೊಸದಿಗಂತ ಡಿಜಿಟಲ್ ಡೆಸ್ಕ್:
ನಿಮ್ಮ ಪಕ್ಷದ ಕಾರ್ಯಕರ್ತರನ್ನು ನಡೆಸಿಕೊಂಡಂತೆ ಕಲಾವಿದರನ್ನು ನಡೆಸಿಕೊಳ್ಳಬೇಡಿ. ಅವರಿಗೆ ಗೌರವ ಕೊಡುವುದನ್ನು ಕಲಿಯಿರಿ ಎಂದು ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಸ್ವಾಮಿ ಡಿಸಿಎಂ ಡಿಕೆ ಶಿವಕುಮಾರ್ ಅವರೇ ಕಾಂಗ್ರೆಸ್ ಪಕ್ಷದ ರಾಜಕೀಯ ಪಾದಯಾತ್ರೆಗೆ ಸಿನಿಮಾ ಕಲಾವಿದರು ಬರುವುದು ಬಿಡುವುದು ಅವರವರ ವಿವೇಚನೆಗೆ ಬಿಟ್ಟದ್ದು. ಕಲಾವಿದರಿಗೆ ಯಾರು ಬೇಕಾದರೂ ಗುರುತಿಸಿಕೊಳ್ಳುವ, ಗುರುತಿಸಿಕೊಳ್ಳದಿರುವ ಸ್ವಾತಂತ್ರ್ಯದ ಹಕ್ಕಿದೆ ಎಂದು ಕಿಡಿಕಾರಿದರು.
ಶನಿವಾರ ಬೆಂಗಳೂರಿನಲ್ಲಿ ನಡೆದ ಚಲನಚಿತ್ರೋತ್ಸವ ಉದ್ಘಾಟನಾ ಕಾರ್ಯಕ್ರಮದಲ್ಲಿ ಡಿಕೆಶಿ ಭಾಷಣ ಭಾಷಣದ ವೇಳೆ ಮೇಕೆದಾಟು ಪಾದೆಯಾತ್ರೆಗೆ ದುನಿಯಾ ವಿಜಯ್, ಸಾಧುಕೋಕಿಲ ಅವರನ್ನು ಹೊರತುಪಡಿಸಿ ಯಾವ ನಟ ನಟಿಯರು ಬಂದಿರಲಿಲ್ಲ ಎಂದು ಅಸಮಾಧಾನ ಹೊರ ಹಾಕಿದ್ದರು.