POWER CUT | ಕರೆಂಟ್‌ ಬರತ್ತೆ ಅಂತ ಕಾಯ್ಕೊಂಡು ಕೂರಬೇಡಿ.. ಬೆಂಗಳೂರಿನ ಈ ಏರಿಯಾಗಳಿಗೆ ಸಂಜೆವರೆಗೂ ಕತ್ತಲೇ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಬೆಂಗಳೂರಿನ ಅನೇಕ ಪ್ರದೇಶಗಳಲ್ಲಿ ಇಂದು ಪೂರ್ವನಿಯೋಜಿತ ವಿದ್ಯುತ್​ ವ್ಯತ್ಯಯವಾಗಲಿದೆ. ದುರಸ್ತಿ ಮತ್ತು ನಿರ್ವಹಣೆಯ ಕಾರಣಕ್ಕೆ ವಿದ್ಯತ್​ ಕಡಿತಗೊಳಿಸಲಾಗುತ್ತಿದೆ ಎಂದು ಬೆಂಗಳೂರು ವಿದ್ಯುತ್​ ಸರಬರಾಜು ಕಂಪನಿ ಮಾಹಿತಿ ನೀಡಿದೆ. ವಿದ್ಯುತ್​ ಕಡಿತ ಪ್ರದೇಶ ಹಾಗೂ ಸಮಯದ ವಿವರವನ್ನು ಬೆಸ್ಕಾಂ ಮಾಧ್ಯಮ ಪ್ರಕಟಣೆ ಹೊರಡಿಸುವ ಮೂಲಕ ತಿಳಿಸಿದೆ.

ಕರ್ನಾಟಕ ವಿದ್ಯುತ್​ ಪ್ರಸರಣ ನಿಗಮ ನಿಯಮಿತ ಲೈನ್‌ ದುರಸ್ತಿ ಮತ್ತು ನಿರ್ವಹಣಾ ಕಾಮಗಾರಿ ಸಲುವಾಗಿ ಇಂದು ಈ ಪ್ರದೇಶಗಳಲ್ಲಿ ವಿದ್ಯುತ್ ಅಡಚಣೆ ಉಂಟಾಗಲಿದೆ. ವಿದ್ಯುತ್ ಅಡಚಣೆಗಾಗಿ ವಿಷಾದಿಸುತ್ತೇವೆ. ಹೆಚ್ಚಿನ ಮಾಹಿತಿ ಅಥವಾ ದೂರುಗಳಿಗೆ ಬೆಸ್ಕಾಂ ಸಹಾಯವಾಣಿ 1912 ಅಥವಾ http://bescom.karnataka.gov.in ಸಂಪರ್ಕಿಸಿ ಎಂದು ಬೆಸ್ಕಾಂ ಮನವಿ ಮಾಡಿದೆ.

ರಾಜಾಜಿನಗರ ವ್ಯಾಪ್ತಿಯ ಬಸವೇಶ್ವರ ನಗರ, ವಿಜಯನಗರ, ಗೋವಿಂದರಾಜ ನಗರ, ಕಾಮಾಕ್ಷಿಪಾಳ್ಯ, ಆರ್‌ಪಿಇ ಲೇಔಟ್, ಬಿನ್ನಿ ಲೇಔಟ್, ಪ್ರಶಾಂತ್ ನಗರ, ಹೊಸಹಳ್ಳಿ ವಿಜಯನಗರ, ಆರ್‌ಪಿಸಿ ಲೇಔಟ್, ಸರ್ವಿಸ್ ರಸ್ತೆ, ವಿಜಯನಗರ 7ನೇ ಮೇನ್​ನಿಂದ 13ನೇ ಮೇನ್​ವರೆಗೆ, ಈಸ್ಟ್ ಸ್ಟೇಜ್ ತಿಮ್ಮೇನಹಳ್ಳಿ. ಎಮ್​ಸಿ ಲೇಔಟ್‌ನ ಭಾಗ, ಬಿನ್ನಿ ಲೇಔಟ್, ಮಾರೇನಹಳ್ಳಿ, ವಿನಾಯಕ ಲೇಔಟ್‌.

ಬಲ್ಲಯ್ಯನ ಕೆರೆ, ಸಿಂಡಿಕೇಟ್ ಬ್ಯಾಂಕ್ ಕಾಲೋನಿ, ಕಾವೇರಿಪುರ 1ನೇ ಬ್ಲಾಕ್, 2ನೇ ಬ್ಲಾಕ್, 3ನೇ ಬ್ಲಾಕ್, 5ನೇ ಬ್ಲಾಕ್, 6ನೇ ಬ್ಲಾಕ್, 7ನೇ ಬ್ಲಾಕ್, 8ನೇ ಬ್ಲಾಕ್, ನಾಗರಭಾವಿ 11ನೇ ಬ್ಲಾಕ್, ಕೆಎಚ್‌ಬಿ ಕಾಲೋನಿ, ಹೆಚ್​ವಿಆರ್​ ಲೇಔಟ್, ಸಿಂಡಿಕೇಟ್ ಕಾಲೋನಿ, ಸಿಂಡಿಕೇಟ್ ಬ್ಯಾಂಕಿಂಗ್ ಸುತ್ತಮುತ್ತಲಿನ ಪ್ರದೇಶ, ಪಾಪಯ್ಯ ಗಾರ್ಡನ್ ಕೆಹೆಚ್​ಬಿ ಕಾಲೋನಿ, ಕೆಹೆಚ್​ಬಿ ಕಾಲೋನಿ, ಮಾಗಡಿ ಮುಖ್ಯರಸ್ತೆ, ಅಗ್ರಹಾರ ದಸರಾ ಹಳ್ಳಿ. ಈ ಎಲ್ಲ ಪ್ರದೇಶಗಳಲ್ಲಿ ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆವರೆಗೆ ಕರೆಂಟ್​ ಇರಲ್ಲ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!