ಹೊಸದಿಗಂತ ಡಿಜಿಟಲ್ ಡೆಸ್ಕ್:
ಗಂಡ ಹೆಂಡತಿ ಜಗಳದಲ್ಲಿ ಪತ್ನಿ ಮನನೊಂದು ಪತಿ ಮಲಗಿದ್ದ ವೇಳೆ ಆತ್ಮಹತ್ಯೆಗೆ ಶರಣಾಗಿದ್ದಾರೆ, ಪತ್ನಿಯ ಅಗಲಿಕೆಯಿಂದ ಮನನೊಂದ ಪತಿಯೂ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಶ್ರೀರಂಗಪಟ್ಟಣ ತಾಲೂಕಿನ ಬಾಬುರಾಯನ ಕೊಪ್ಪಲು ಗ್ರಾಮದ ಪ್ರಭಾವತಿ (45), ದಿಲೀಪ್ (45) ಮೃತ ದುರ್ದೈವಿಗಳು.
ಈ ದಂಪತಿ ನಡುವೆ ಗೌಟುಂಬಿಕ ಜಗಳ ನಡೆಯುತ್ತಿತ್ತು. ಹೀಗಾಗಿ ಇಬ್ಬರ ನಡುವೆ ವೈಮನಸ್ಸು ಮೂಡಿತ್ತು. ಆದರೆ ಮನೆಯಲ್ಲಿ ರಾತ್ರಿ ಹೆಂಡತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಳು. ಪತ್ನಿ ಸಾವನ್ನು ಅರಗಿಸಿಕೊಳ್ಳದ ಗಂಡ ಮಧ್ಯರಾತ್ರಿ ಗ್ರಾಮದ ಜಮೀನುವೊಂದಕ್ಕೆ ತೆರಳಿ ಅಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.