ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕ ಗೃಹ ಸಚಿವ ಜಿ.ಪರಮೇಶ್ವರ್ ಅವರು ಎಚ್‌ಎಂಪಿವಿ ವೈರಸ್ ಬಗ್ಗೆ ಕಳವಳ ವ್ಯಕ್ತಪಡಿಸಿ, ವೈರಸ್ ಅಪಾಯಕಾರಿ ಅಲ್ಲ ಎಂದು ಆರೋಗ್ಯ ತಜ್ಞರು ಭರವಸೆ ನೀಡಿದ್ದಾರೆ ಎಂದು ತಿಳಿಸಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿದ ಪರಮೇಶ್ವರ್, ‘ಇದು ಅಪಾಯಕಾರಿ ಅಲ್ಲ ಎಂದು ವೈದ್ಯರು ಮತ್ತು ತಜ್ಞರು ಹೇಳುತ್ತಿದ್ದಾರೆ ಆದರೆ ಈಗಾಗಲೇ ಆರೋಗ್ಯ ಇಲಾಖೆಯಿಂದ ಮುನ್ನೆಚ್ಚರಿಕೆಗೆ ಸೂಚನೆ ನೀಡಲಾಗಿದೆ, ನಾವೆಲ್ಲರೂ ಆ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಬೇಕಾಗಿದೆ” ಎಂದು ಸಲಹೆ ನೀಡಿದ್ದಾರೆ.