ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿರುವ 25 ಸಾವಿರ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಈ ವರ್ಷದಿಂದಲೇ ಉಚಿತವಾಗಿ ನೀಟ್ ತರಬೇತಿ ನೀಡಲು ನಿರ್ಧರಿಸಲಾಗಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ಈ ವರ್ಷದಿಂದಲೇ ಉಚಿವಾಗಿ ನೀಟ್ ತರಬೇತಿ ನೀಡಲಾಗುತ್ತದೆ. ತಜ್ಞರಿಂದ ರಾಜ್ಯದ 25 ಸಾವಿರ ಬಡ ಪಿಯು ವಿದ್ಯಾರ್ಥಿಗಳಿಗೆ ನೀಟ್ ತರಬೇತಿ ನೀಡಲಾಗುತ್ತದೆ. ಇದಕ್ಕಾಗಿ 12 ಕೋಟಿ ರೂಪಾಯಿ ಸರ್ಕಾರ ಖರ್ಚು ಮಾಡುತ್ತದೆ. ಆನ್ಲೈನ್ನಲ್ಲೂ ತರಬೇತಿ ನಡೆಯಲಿದೆ ಎಂದರು.
25 ಸಾವಿರ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲು ಶಿಕ್ಷಣ ಇಲಾಖೆ ಪರೀಕ್ಷೆ ನಡೆಯಲಿದೆ. ಪಾಸ್ ಆಗುವ 25 ಸಾವಿರ ವಿದ್ಯಾರ್ಥಿಗಳಿಗೆ ಉಚಿತವಾಗಿ ತರಬೇತಿ ನೀಡಲಾಗುತ್ತದೆ. ಅಲ್ಲದೆ, 8,9,10ನೇ ತರಗತಿ ವಿಜ್ಞಾನ ವಿದ್ಯಾರ್ಥಿಗಳಿಗೆ ವಿಶೇಷ ತರಬೇತಿ ನೀಡುವ ಮರು ಸಿಂಚನ ಕಾರ್ಯಕ್ರಮ ಜಾರಿ ಮಾಡಿದ್ದೇವೆ ಎಂದು ತಿಳಿಸಿದರು.