ಹೊಸದಿಗಂತ ಡಿಜಿಟಲ್ ಡೆಸ್ಕ್:
ಶೂಟಿಂಗ್ ವೇಳೆ ಏಟು ಮಾಡಿಕೊಂಡು, ಶಸ್ತ್ರ ಚಿಕಿತ್ಸೆಯ ನಂತರ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿರುವ ನಟ ಶ್ರೀಮುರಳಿ ಮತಗಟ್ಟಿಗೆ ಬಂದು ಮತದಾನ ಮಾಡಿದ್ದಾರೆ.
ಮತದಾನದ ನಂತರ ಮಾತನಾಡಿ, ಮತದಾನ ನಮ್ಮ ಹಕ್ಕು ಮತ ಚಲಾಯಿಸಿದ್ದೇವೆ. ನಮ್ಮ ಬೂತ್ ಅಲ್ಲಿ ತುಂಬಾ ಜನ ಇದ್ರು, ನೋಡಿ ತುಂಬಾ ಖುಷಿ ಆಯ್ತು. ಹಿರಿಯ ನಾಗರೀಕರು ಬರ್ತಾ ಇದ್ದಾರೆ. ಪ್ರಜಾಪ್ರಭುತ್ವ ನಾವು ಆಯ್ಕೆ ಮಾಡಿಕೊಳ್ಳೋದು. ಯೂತ್ ಇನ್ನೂ ಬರ್ತಿಲ್ಲ ಅಂತಾ ಅಂದರೆ ಏನು ಹೇಳಬೇಕು. ಇಂತಹ ಜವಾಬ್ದಾರಿ ಮೆರೆಯಬಾರದು. ಇಲ್ಲೇನೂ ಎಕ್ಸಾಂ ಬರೆಸ್ತಾ ಇಲ್ಲ, ಬಂದು ವೋಟ್ ಮಾಡ್ರೋ ಎಂದು ಯುವ ಪೀಳಿಗೆಗೆ ಮೆಸೇಜ್ ನೀಡಿದ್ದಾರೆ.