ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಶ್ಚಿಮ ಬಂಗಾಳದ ಎಲ್ಲಾ 42 ಕ್ಷೇತ್ರಗಳಿಗೆ ಸಿಎಂ ಮಮತಾ ಬ್ಯಾನರ್ಜಿ ಪಕ್ಷ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ್ದು, ಇದರ ಬೆನ್ನಲ್ಲೇ ನಾಮಪತ್ರ ಹಿಂಪಡೆಯುವ ದಿನದವರೆಗೂ ಮೈತ್ರಿಗೆ ಬಾಗಿಲು ತೆರೆದಿರಲಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
‘ಟಿಎಂಸಿ ಜತೆ ಗೌರವಯುತ ಸೀಟು ಹಂಚಿಕೆ ಬಗ್ಗೆ ಕಾಂಗ್ರೆಸ್ ತನ್ನ ಅಭಿಲಾಷೆಯನ್ನು ಪದೇ ಪದೇ ವ್ಯಕ್ತಪಡಿಸಿತ್ತು. ಯಾವುದೇ ಒಪ್ಪಂದಗಳು ಮಾತುಕತೆಯಿಂದಾಗಿ ಅಂತಿಮಗೊಳ್ಳಬೇಕೇ ವಿನಾ ಏಕಪಕ್ಷೀಯ ಘೋಷಣೆಗಳಿಂದಲ್ಲ. ಬಿಜೆಪಿ ವಿರುದ್ಧ ಇಂಡಿಯಾ ಒಕ್ಕೂಟ ಒಗ್ಗಟ್ಟಾಗಿ ಹೋರಾಟ ಮಾಡುವುದನ್ನು ಕಾಂಗ್ರೆಸ್ ಯಾವತ್ತೂ ಬಯಸುತ್ತದೆ’ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಹೇಳಿದ್ದಾರೆ.