ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಅಯೋಧ್ಯೆಯ ರಾಮಮಂದಿರದಲ್ಲಿ ನಡೆದ ಐತಿಹಾಸಿಕ ರಾಮಲಲಾನ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮಕ್ಕೂ ಮುನ್ನ ನಡೆದ ಮನೆ ಮನೆಗೆ ಮಂತ್ರಾಕ್ಷತೆ ಅಭಿಯಾನದಲ್ಲಿ 44 ಲಕ್ಷ 98 ಸಾವಿರ ಪ್ರತಿನಿಧಿಗಳು ಸಕ್ರಿಯವಾಗಿ ಭಾಗವಹಿಸಿದ್ದರು ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸಹ ಸರಕಾರ್ಯವಾಹ ಡಾ. ಮನಮೋಹನ್ ವೈದ್ಯ ಹೇಳಿದ್ದಾರೆ.
ನಾಗ್ಪುರದಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ ವಾರ್ಷಿಕ ಅಖಿಲ ಭಾರತೀಯ ಪ್ರತಿನಿಧಿ ಸಭೆಯ ಸಂದರ್ಭ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಭಿಯಾನ ವಿವರ ನೀಡಿದರು.
ಈ ಅಭಿಯಾನದಲ್ಲಿ 5,98,778ಗ್ರಾಮಗಳನ್ನು ಸಂಪರ್ಕಿಸಲಾಗಿದೆ. 44 ಲಕ್ಷ 98ಸಾವಿರ ಪ್ರತಿನಿಧಿಗಳು ಅಭಿಯಾನದಲ್ಲಿ ಭಾಗವಹಿಸಿದ್ದಾರೆ. ದೇಶಾದ್ಯಂತ 19 ಕೋಟಿ 38 ಲಕ್ಷ ಕುಟುಂಬಗಳನ್ನು ಸಂಪರ್ಕಿಸುವ ಕೆಲಸವನ್ನು ನಮ್ಮ ಕಾರ್ಯಕರ್ತರು ಮಾಡಿದ್ದಾರೆ. ಇದಲ್ಲದೆ ದೇಶಾದ್ಯಂತ 9 ಲಕ್ಷ 85 ಸಾವಿರ ದೇವಾಲಯ ಕೇಂದ್ರಿತವಾಗಿ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮಗಳಲ್ಲಿ 27,81,54,೦೦೦ಕ್ಕೂ ಹೆಚ್ಚು ಜನರ ಭಾಗವಹಿಸಿದ್ದರು ಎಂದು ಅವರು ಮಾಹಿತಿ ನೀಡಿದ್ದಾರೆ.