October 15, 2026
Thursday, October 15, 2026
spot_img

ಮನೆ ಮನೆಗೆ ಎಸ್‌ಐಆರ್ ಜಾಗೃತಿ: ಕೆ.ಎಸ್. ನವೀನ್ ನೇತೃತ್ವದಲ್ಲಿ ಬಿಜೆಪಿ ಅಭಿಯಾನ

ಹೊಸದಿಗಂತ ವರದಿ ಚಿತ್ರದುರ್ಗ:

ಮತದಾರ ಪಟ್ಟಿ ಪರಿಷ್ಕರಣಾ ಕಾರ್ಯಕ್ರಮದ ಅಂಗವಾಗಿ ಬಿಜೆಪಿ ವತಿಯಿಮದ ಮನೆ ಮನೆ ಭೇಟಿ ಮಹಾ ಸಂಪರ್ಕ ಅಭಿಯಾನ ಹಮ್ಮಿಕೊಳ್ಳಲಾಗಿದೆ.

ಅದರಂತೆ ವಿಧಾನ ಪರಿಷತ್ ಸದಸ್ಯರಾದ ಕೆ.ಎಸ್.ನವೀನ್ ಅವರ ನೇತೃತ್ವದಲ್ಲಿ ಹೊಳಲ್ಕೆರೆ ವಿಧಾನಸಭಾ ಕ್ಷೇತ್ರದ ಎನ್.ಜಿ. ಹಳ್ಳಿ ಮತ್ತು ಹೊಸದುರ್ಗ ವಿಧಾನಸಭಾ ಕ್ಷೇತ್ರದ ದೇವಿಗೆರೆ ಗ್ರಾಮ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (SIR) ಕುರಿತು ಮನೆ ಮನೆಗೆ ಭೇಟಿ ನೀಡಿ ಜಾಗೃತಿ ಮೂಡಿಸಲಾಯಿತು.

ಈ ಅಭಿಯಾನದ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ಗುರುಸ್ವಾಮಿ, ಎನ್.ಜಿ.ಹಳ್ಳಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಶಿವಕುಮಾರ್, ಮಾಜಿ ಸದಸ್ಯರಾದ ಶ್ರೀನಿವಾಸ್ ಸೇರಿದಂತೆ ಪಕ್ಷದ ಹಿರಿಯ ಮುಖಂಡರು, ಸ್ಥಳೀಯ ಮುಖಂಡರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

Must Read