Wednesday, August 10, 2022

Latest Posts

ಬೆಂಗಳೂರಿನಲ್ಲಿ ಲಸಿಕೆ ಹಾಕಿಸದವರನ್ನು ಪತ್ತೆ ಹಚ್ಚಲು ಮನೆಮನೆ ಸರ್ವೆ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸದಿಗಂತ ಆನ್‌ಲೈನ್ ಡೆಸ್ಕ್:

ಬೆಂಗಳೂರಿನಲ್ಲಿ ಲಸಿಕೆ ಹಾಕಿಸಿಕೊಳ್ಳದವರನ್ನು ಪತ್ತೆ ಹಚ್ಚಲು ಮನೆ ಮನೆಗೆ ಸರ್ವೆ ಮಾಡಲಾಗುತ್ತದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ಇಂದಿಲ್ಲಿ ತಿಳಸಿದ್ದಾರೆ.
ಲಸಿಕೆ ಹಾಕಿಸಿಕೊಳ್ಳು ಸಾಕಷ್ಟು ಮಂದಿ ಈಗಲೂ ಹಿಂದು ಮುಂದು ನೋಡುತ್ತಿದ್ದಾರೆ. ಎಲ್ಲರಿಗೂ ಲಸಿಕೆ ಹಾಕಿಸುವುದು ಅತ್ಯಗತ್ಯ. ಈವರೆಗೆ ಎಲ್ಲಿಯೂ ಶೇ.100ರಷ್ಟು ಲಸಿಕೆ ಹಾಕಲು ಸಾಧ್ಯವೇ ಆಗಿಲ್ಲ. ಹಾಗಾಗಿ ಪ್ರತಿ ಮನೆಗೂ ತೆರಳಿ ಅವರ ಮನವೊಲಿಸಿ ವ್ಯಾಕ್ಸಿನ್ ಹಾಕಿಸಲಾಗುವುದು ಎಂದಿದ್ದಾರೆ.
ಬೆಂಗಳೂರಿನಲ್ಲಿ ಈಗಾಗಲೇ ಶೇ.53 ರಷ್ಟು ಮಂದಿ ತಮ್ಮ ಮೊದಲ ಡೋಸ್ ಪಡೆದಿದ್ದಾರೆ. ಇನ್ನುಳಿದ ದಿನದಲ್ಲಿ ಹಂತಹಂತವಾಗಿ ಉಳಿದವರಿಗೂ ಲಸಿಕೆ ಹಾಕಲಾಗುವುದು ಎಂದಿದ್ದಾರೆ. ಕಾಲೇಜು ವಿದ್ಯಾರ್ಥಿಗಳಿಗೂ ಲಸಿಕೆ ಹಾಕಿಸಬೇಕಿದ್ದು, ಕಾಲೇಜಿನಲ್ಲಿ ಶಿಬಿರ ಏರ್ಪಡಿಸಲಾಗಿದೆ ಎಂದಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss