ಬದರಿನಾಥ ದೇಗುಲದ ಬಾಗಿಲು ಓಪನ್: ಪ್ರಧಾನಿ ಮೋದಿ ಹೆಸರಲ್ಲಿ ಮೊದಲ ಪೂಜೆ!

ಹೊಸದಿಗಂತ ಡಿಜಿಟಲ್‌ ಡೆಸ್ಕ್

ಗುರುವಾರದಿಂದ ಉತ್ತರಾಖಂಡದ ಬದರಿನಾಥ ದೇವಾಲಯದ ದ್ವಾರಗಳನ್ನು ತೆರೆಯಲಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಅವರ ಹೆಸರಿನಲ್ಲಿ ಮೊದಲ ಪೂಜೆ ಮಾಡಲಾಯಿತು ಎಂದು ದೇವಾಲಯದ ಸಮಿತಿ ತಿಳಿಸಿದೆ.

ಇಂದು ಬೆಳಗ್ಗೆ 7:10ಕ್ಕೆ ದೇವಾಲಯದ ಬಾಗಿಲು ತೆತೆರೆಯುವ ವೇಳೆ ಸಾವಿರಾರು ಯಾತ್ರಾರ್ಥಿಗಳು ಆಗಮಿಸಿದರು. ದೇವಾಲಯ ದ್ವಾರ ತೆಗೆಯುತ್ತಿದ್ದಂತೆ ಭಗವಾನ್ ವಿಷ್ಣುವಿಗೆ ನಮನ ಸಲ್ಲಿಸಿದರು. ಈ ವೇಳೆ ದೇವಸ್ಥಾನವನ್ನು 15 ಕ್ವಿಂಟಾಲ್ ಹೂವಿನಿಂದ ಅಲಂಕರಿಸಲಾಗಿತ್ತು ಮತ್ತು ಉದ್ಘಾಟನಾ ಸಮಾರಂಭದ ನಂತರ ಅದರ ಪ್ರಧಾನ ಅರ್ಚಕ ಈಶ್ವರಿ ಪ್ರಸಾದ್ ನಂಬೂದಿರಿ ಅವರು ಗರ್ಭಗುಡಿಯಲ್ಲಿ ವಿಶೇಷ ಪೂಜೆ ಸಲ್ಲಿಸಿ, ಎಲ್ಲರಿಗೂ ಒಳಿತಾಗಲಿ ಎಂದು ಪ್ರಾರ್ಥಿಸಿದರು.

ಇಂದು ಮೊದಲ ಪೂಜೆಯನ್ನು ಪ್ರಧಾನಿ ನರೇಂದ್ರ ಮೋದಿಯವರ ಹೆಸರಿನಲ್ಲಿ ಮಾಡಲಾಯಿತು ಎಂದು ಬದರಿನಾಥ್-ಕೇದಾರನಾಥ ದೇವಾಲಯ ಸಮಿತಿ ತಿಳಿಸಿದೆ. ಗುರುವಾರ ಬದರಿನಾಥ ತೆರೆಯುವುದರೊಂದಿಗೆ, ಉತ್ತರಾಖಂಡದ ಎಲ್ಲಾ ಚಾರ್ ಧಾಮ್ ದೇವಾಲಯಗಳು ಈಗ ಯಾತ್ರಾರ್ಥಿಗಳ ದರ್ಶನಕ್ಕೆ ಮುಕ್ತವಾಗಿವೆ. ಗಂಗೋತ್ರಿ ಮತ್ತು ಯಮುನೋತ್ರಿ ಏಪ್ರಿಲ್ 22 ರಂದು ಹಾಗೂ ಕೇದಾರನಾಥ ದೇವಾಲಯವನ್ನು ಏಪ್ರಿಲ್ 25 ರಂದು ತೆರೆಯಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!