ನಾಳೆಯಿಂದ ಐತಿಹಾಸಿಕ ಹಾಸನಾಂಬ ದೇವಾಲಯದ ಬಾಗಿಲು ಓಪನ್‌: 9 ದಿನ ಮಾತ್ರ ದರುಶನಕ್ಕೆ ಅವಕಾಶ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಹಾಸನಾಂಬ ದೇಗುಲದ ಬಾಗಿಲನ್ನು ಗುರುವಾರರಂದು ತೆರೆಯಲಾಗುತ್ತದೆ. ನವೆಂಬರ್ 3ರವರೆಗು ಮಾತ್ರ ದೇಗುಲದ ಬಾಗಿಲು ತೆರೆದಿರುತ್ತದೆ.

ವರ್ಷದಿಂದ ವರ್ಷಕ್ಕೆ ಹಲವು ಆಕರ್ಷಣೆಗಳೊಂದಿಗೆ ಗಮನ ಸೆಳೆಯುತ್ತಿರುವ ಹಾಸನಾಂಬೆ ಉತ್ಸವದಲ್ಲಿ ಈ ವರ್ಷ ದಸರಾ ಮಾದರಿಯ ದೀಪಾಲಂಕಾರ, ಇದೇ ಮೊದಲಬಾರಿಗೆ ಫಲಪುಷ್ಪ ಪ್ರದರ್ಶನ, ಹಾಟ್ ಏರ್ ಬಲೂನ್, ರಾಜ್ಯಮಟ್ಟದ ನೃತ್ಯ ಸ್ಪರ್ಧೆ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲು ನಿರ್ಧರಿಸಲಾಗಿದೆ.

ಅಕ್ಟೋಬರ್ 24ರ ಗುರುವಾರ ಮದ್ಯಾಹ್ನ 12 ಗಂಟೆಗೆ ದೇಗುಲದ ಗರ್ಭಗುಡಿ ಬಾಗಿಲು ತೆರೆಯುತ್ತದೆ. ಕಳೆದ ಬಾರಿ 14 ಲಕ್ಷ ಭಕ್ತರು ದೇವಿಯ ದರ್ಶನ ಪಡೆದಿದ್ದರು. ಈ ವರ್ಷ ಸುಮಾರು 20 ರಿಂದ 25 ಲಕ್ಷ ಭಕ್ತರು ಬರುವ ನಿರೀಕ್ಷೆಯಲ್ಲಿ ಜಿಲ್ಲಾಡಳಿತ ಇದ್ದು, ಇದಕ್ಕಾಗಿ ಭರ್ಜರಿ ತಯಾರಿ ನಡೆಸಿದೆ. ದೇಗುಲವನ್ನು ಆಕರ್ಷಕವಾಗಿ ಅಲಂಕಾರ ಮಾಡಲಾಗಿದ್ದು ದೇಗುಲದ ಆವರಣದಲ್ಲಿ ಭಕ್ತರ ದರ್ಶನಕ್ಕಾಗಿ ಸರತಿ ಸಾಲುಗಳ ಬ್ಯಾರಿಕೇಡ್, ಸಾಂಪ್ರದಾಯಿಕ ಮಾದರಿಯ ಮಾಡೆಲ್​ಗಳು, ಮಳೆ, ಬಿಸಿಲಿನಿಂದ ರಕ್ಷಣೆಗಾಗಿ ಜ್ಮನ್ ಟೆಂಟ್ ಮತ್ತು ದೊನ್ನೆ ಪ್ರಸಾದ ವಿತರಣೆಗೂ ವ್ಯವಸ್ಥೆ ಮಾಡಲಾಗಿದೆ.

ವರ್ಷದಿಂದ ವರ್ಷಕ್ಕೆ ಹಲವು ವಿಶೇಷತೆಗಳನ್ನು ಒಳಗೊಂಡು ನಡೆಯುತ್ತಿರುವ ಹಾಸನಾಂಬೆ ದೇವಿ ಹಾಗೂ ಸಿದ್ದೇಶ್ವರಸ್ವಾಮಿ ಜಾತ್ರಾಮಹೋತ್ಸವದಲ್ಲಿ ಈ ಬಾರಿ ನಗರದಲ್ಲಿ ಮೈಸೂರು ದಸರಾ ಮಾದರಿಯ ಚಿತ್ತಾಕರ್ಷಕ ಲೈಟಿಂಗ್ ಮಾಡಲಾಗಿದೆ. ಲೈಟಿಂಗ್ ವೀಕ್ಷಣೆಗೆ ಡಬಲ್ ಡೆಕ್ಕರ್ ಬಸ್ ಇರಲಿದೆ.

ಬರುವ ಭಕ್ತರ ಗಮನ ಸೆಳೆಯಲು ಹಾಟ್ ಏರ್ ಬಲೂನ್ ಸಂಚಾರ, ಪ್ಯಾರಾ ಗ್ಲೈಡಿಂಗ್, ರಾಜ್ಯಮಟ್ಟದ ಸಮೂಹ ನೃತ್ಯ ಸ್ಪರ್ಧೆ ಸೇರಿದಂತೆ ಹಲವು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಕಳೆದ ವರ್ಷ ಆದ ಕೆಲ ಲೋಪಗಳನ್ನು ಸರಿಪಡಿಸಿಕೊಂಡು, ಈ ವರ್ಷ ಅದ್ಧೂರಿ ಹಬ್ಬ ಆಚರಣೆಗೆ ತಯಾರಿ ಮಾಡಿಕೊಂಡಿದ್ದೇವೆ. ಹಾಸನಾಂಬ ಆ್ಯಪ್​, ದರ್ಶನಕ್ಕೆ ಆನ್ಲೈನ್ ಬುಕ್ಕಿಂಗ್ ವ್ಯವಸ್ಥೆ ಸೇರಿ ಸಕಲ ತಯಾರಿ ಮಾಡಿಕೊಳ್ಳಲಾಗಿದೆ. ಒಟ್ಟಿನಲ್ಲಿ ನಾಡಿನ ಮೂಲೆ ಮೂಲೆಯಿಂದ ಬರುವ ಭಕ್ತರಿಗಾಗಿ ಸಕಲ ರೀತಿಯ ವ್ಯವಸ್ಥೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾದಿಕಾರಿ ಸಿ ಸತ್ಯಭಾಮ ಹೇಳಿದರು.

 

- Advertisement - Skool Shine
Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!