Wednesday, August 10, 2022

Latest Posts

ದೋರನಹಳ್ಳಿ ರೈತನ ಕುಟುಂಬಕ್ಕೆ 5 ಲಕ್ಷ ಪರಿಹಾರ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸ ದಿಗಂತ ವರದಿ, ಯಾದಗಿರಿ :

ಜಿಲ್ಲೆಯ ಶಹಾಪುರ ತಾಲೂಕಿನ ದೋರನಹಳ್ಳಿ ಗ್ರಾಮದ ಆತ್ಮಹತ್ಯೆ ಮಾಡಿಕೊಂಡ ರೈತ ಭೀಮರಾಯ ಶಿವಪ್ಪ ಸುರಪುರ ಇವರ ಕುಟುಂಬಕ್ಕೆ ಪರಿಹಾರ ಮತ್ತು ಸೌಲಭ್ಯ ಒದಗಿಸಿದೆ.
ಸರ್ಕಾರದ ಮಾರ್ಗಸೂಚಿಯಂತೆ ಮೃತರ ಕುಟುಂಬಕ್ಕೆ ರೂ 5 ಲಕ್ಷ ಗಳನ್ನು ಪರಿಹಾರ ಮಂಜೂರು ಮಾಡಲಾಗಿದೆ. ರಾಷ್ಟ್ರೀಯ ಕುಟುಂಬ ನೆರವು ಯೋಜನೆಯಡಿ ಮೃತನ ತಾಯಿಗೆ 20 ಸಾವಿರ ರೂ ಮಂಜೂರು ಮಾಡಲಾಗಿದೆ.
ಸಾಮಾಜಿಕ ಭದ್ರತಾ ಯೋಜನೆ ಸಂಧ್ಯಾ ಸುರಕ್ಷಾ ಅಡಿ ಪ್ರತಿ ತಿಂಗಳಿಗೆ ಒಂದು ಸಾವಿರ ರೂಪಾಯಿಗಳನ್ನು ಮೃತನ ತಾಯಿಗೆ ಪಿಂಚಣಿ ಮಂಜೂರು ಮಾಡಿದೆ.
ಮೃತ ರೈತನ ಮಗಳಾದ ಚಂದ್ರಕಲಾ ಗೆ ಹೊರಗುತ್ತಿಗೆ ಆಧಾರದ ಮೇಲೆ ಶಹಾಪುರ ನಗರಸಭೆಯಲ್ಲಿ “ಡಿ” ಗ್ರೂಪ್ ನೌಕರಿಯನ್ನು ನೀಡಲಾಗಿದೆ.
ಅಂತ್ಯಸಂಸ್ಕಾರಕ್ಕಾಗಿ 30 ಸಾವಿರ ರೂಪಾಯಿಗಳನ್ನು ಮಂಜೂರು ಮಾಡಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಶಂಕರಗೌಡ ಸೋಮನಾಳ, ಸಹಾಯಕ ಆಯುಕ್ತ ಪ್ರಶಾಂತ ಹನಗಂಡಿ, ಶಹಾಪುರ ತಹಶೀಲ್ದಾರ ಜಗನ್ನಾಥರೆಡ್ಡಿ, ಹುಣಸಗಿ ತಹಶೀಲ್ದಾರ ಮಹಾದೇವಪ್ಪಗೌಡ ಬಿರಾದಾರ ಇನ್ನಿತರರು ಉಪಸ್ಥಿತರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss