ʼದೋಸ್ತಿʼ ನಾಡು ಬಿಹಾರ್‌ಗೆ ಬಂಪರ್, ಬಜೆಟ್‌ನಲ್ಲಿ ಭರಪೂರ ಕೊಡುಗೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಈ ಬಾರಿಯ ಬಜೆಟ್‌ನಲ್ಲಿ ಬಿಹಾರಕ್ಕೆ ಹೆಚ್ಚಿನ ಮಹತ್ವ ನೀಡಲಾಗಿದೆ. ಐಐಟಿ ಕಾಲೇಜು, ಮೆಡಿಕಲ್ ಕಾಲೇಜು ಹಾಗೂ ಆಹಾರ ಸಂಸ್ಕರಣೆಗೆ ಹೆಚ್ಚಿನ ಒತ್ತನ್ನು ಬಜೆಟ್‌ನಲ್ಲಿ ಕೊಡಲಾಗಿದೆ.

ಕಳೆದ ಬಾರಿ ಬಜೆಟ್‌ನಲ್ಲಿ ಆಂಧ್ರಪ್ರದೇಶಕ್ಕೆ ಹೆಚ್ಚಿನ ಒತ್ತು ನೀಡಲಾಗಿತ್ತು. ಈ ಬಾರಿ ಮೈತ್ರಿ ಪಕ್ಷಗಳಿರುವ ರಾಜ್ಯಕ್ಕೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಬಿಹಾರದಲ್ಲಿ ಆಹಾರ ಸಂಸ್ಕರಣೆಗೆ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಫುಡ್ ಟೆಕ್ನಾಲಜಿಯನ್ನು ನಿರ್ಮಾಣ ಮಾಡಲಾಗುವುದು. ಆಹಾರವಾಗಿ ಬಳಸುವ ಮಖನಾ ಉತ್ಪಾದನೆ, ಸಂಸ್ಕರಣೆ, ಮೌಲ್ಯವರ್ಧನೆ ಮತ್ತು ಮಾರುಕಟ್ಟೆಯನ್ನು ಸುಧಾರಿಸಲು ಬಿಹಾರದಲ್ಲಿ ಮಖನಾ ಮಂಡಳಿಯನ್ನು ಸ್ಥಾಪಿಸಲಾಗುವುದು. ಈ ಮಂಡಳಿಯು ಮಖನಾ ರೈತರಿಗೆ ತರಬೇತಿ ಬೆಂಬಲವನ್ನು ಒದಗಿಸುತ್ತದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ಐಐಟಿ ಪಾಟ್ನಾ ಸೇರಿದಂತೆ ಒಟ್ಟು ಐದು ಐಐಟಿ ಕಾಲೇಜುಗಳನ್ನು ಅಭಿವೃದ್ಧಿಪಡಿಸಲಾಗುವುದು. ಅಷ್ಟೇ ಅಲ್ಲದೇ 75,000 ವೈದ್ಯಕೀಯ ಸೀಟುಗಳನ್ನು ಹೆಚ್ಚಳ ಮಾಡಲಾಗಿದೆ. ಎಲ್ಲಾ ಜಿಲ್ಲೆಗಳಲ್ಲಿ ಡೇ ಕೇರ್ ಕ್ಯಾನ್ಸರ್ ಸೆಂಟರ್‌ಗಳನ್ನು ಮೂರು ವರ್ಷಗಳಲ್ಲಿ ನಿರ್ಮಿಸಲಾಗುವುದು. 2025-26ರ ವೇಳೆಗೆ 200 ಸೆಂಟರ್‌ಗಳನ್ನು ನಿರ್ಮಾಣ ಮಾಡಲಾಗುವುದು ಎಂದು ಬಜೆಟ್‌ನಲ್ಲಿ ಘೋಷಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!