ದೂರಸಂಪರ್ಕ ಇಲಾಖೆಯಲ್ಲಿ 270 ಹುದ್ದೆಗಳ ನೇಮಕಾತಿ..ತಿಂಗಳಿಗೆ 47 ಸಾವಿರ ವೇತನ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ದೂರಸಂಪರ್ಕ ಇಲಾಖೆಯಲ್ಲಿ 270 ಉಪ ವಿಭಾಗೀಯ ಎಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಇಂಜಿನಿಯರಿಂಗ್‌ ನಲ್ಲಿ ಪದವಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ಫೆಬ್ರವರಿ 22,2023ರ ಅನ್ವಯ ಗರಿಷ್ಟ 56 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು.

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಉಪ ವಿಭಾಗೀಯ ಇಂಜಿನಿಯರ್‌ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 47,600/- ರಿಂದ 1,51,100/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಅರ್ಹ ಅಭ್ಯರ್ಥಿಗಳು ಆಫ್‌ಲೈನ್‌ ಮೂಲಕ ಫೆಬ್ರವರಿ 22,2023ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!