ಯುಪಿ ಎಕ್ಸ್‌ಪ್ರೆಸ್‌ ವೇ ನಲ್ಲಿ ಡಬಲ್‌ ಡೆಕ್ಕರ್‌ ಮುಖಾಮುಖಿ: ಎಂಟು ಮಂದಿಯ ಸಾವು, ಹಲವರಿಗೆ ಗಾಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್:
ಉತ್ತರ ಪ್ರದೇಶದ ಪೂರ್ವಾಂಚಲ ಎಕ್ಸ್‌ಪ್ರೆಸ್‌ವೇನಲ್ಲಿ ಸೋಮವಾರ ಬೆಳಗ್ಗೆ ಎರಡು ಡಬಲ್ ಡೆಕ್ಕರ್ ಖಾಸಗಿ ಬಸ್‌ಗಳು ಪರಸ್ಪರ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಂದಿ ಸಾವನ್ನಪ್ಪಿದ್ದು ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ವರದಿಗಳ ಪ್ರಕಾರ, ಲೋನಿ ಕತ್ರಾ ಪೊಲೀಸ್ ಠಾಣೆ ವ್ಯಾಪ್ತಿಯ ನಾರಾಯಣ್ ಪುರ್ ಗ್ರಾಮದ ಬಳಿ ಈ ಘಟನೆ ನಡೆದಿದೆ.ಎರಡೂ ವಾಹನಗಳು ಬಿಹಾರದಿಂದ ದೆಹಲಿಗೆ ತೆರಳುತ್ತಿದ್ದಾಗ ಡಿಕ್ಕಿ ಸಂಭವಿಸಿದೆ. ಒಂದು ಬಸ್‌ ನಿಂತಿದ್ದಾಗ ವೇಗದಲ್ಲಿ ಬಂದ ಎರಡನೆಯದು ಡಿಕ್ಕಿ ಹೊಡೆದಿದೆ.ಗಾಯಾಳುಗಳನ್ನು ಚಿಕಿತ್ಸೆ ನಂತರ ಲಕ್ನೋ ಟ್ರಾಮಾ ಸೆಂಟರ್‌ಗೆ ಕಳುಹಿಸಲಾಗಿದೆ.

ಸ್ಥಳಕ್ಕೆ ಬಾರಾಬಂಕಿ ಪೋಲೀಸರು ಧಾವಿಸಿದ್ದು ಉನ್ನತಾಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ದುರಂತದಲ್ಲಿ ಸಾವನ್ನಪ್ಪಿದ ಸಂತ್ರಸ್ತರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ ಎಂದು ಮೂಲಗಳು ವರದಿ ಮಾಡಿವೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!