Sunday, April 18, 2021

Latest Posts

ಸ್ಟೈಲಿಶ್ ಸ್ಟಾರ್ ಅಭಿಮಾನಿಗಳಿಗೆ ಡಬಲ್‌ ಧಮಾಕಾ: ಅಲ್ಲು ಬರ್ತ್‌ಡೇಗೆ ʻಪುಷ್ಪʼ ಟೀಸರ್ ರಿಲೀಸ್

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಟಾಲಿವುಡ್ ನ ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ಗೆ ಇಂದು 38ನೇ ಹುಟ್ಟುಹಬ್ಬದ ಸಂಭ್ರಮ. ಸ್ಟೈಲಿಶ್‌ ಸ್ಟಾರ್‌ ಅಭಿಮಾನಿಗಳಿಗೆ ಇಂದು ಡಬಲ್‌ ಧಮಾಕಾ.

ಹೌದು… ಸಿನಿ ಅಭಿಮಾನಿಗಳಲ್ಲಿ ಭಾರಿ ನಿರೀಕ್ಷೆ ಮೂಡಿಸಿರುವ ಪ್ಯಾನ್‌ ಇಂಡಿಯಾ ಮೂವಿ ʻಪುಷ್ಪʼ ಟೀಸರ್‌ ರಿಲೀಸ್‌ ಆಗಿದೆ.

ಅಲ್ಲು ಅರ್ಜುನ್ ಅವರ ಹುಟ್ಟುಹಬ್ಬದ ಪ್ರಯುಕ್ತ ನಿನ್ನೆಯೇ ಅವರ ‘ಪುಷ್ಪ’ ಚಿತ್ರದ ಟೀಸರ್ ಅನ್ನು ಬಿಡುಗಡೆ ಮಾಡಲಾಗಿದೆ. ಸುಕುಮಾರ್ ಈ ಸಿನಿಮಾ ನಿರ್ದೇಶಿಸಿದ್ದು, ರಶ್ಮಿಕಾ ಮಂದಣ್ಣ ನಾಯಕಿಯಾಗಿ ಅಭಿನಯಿಸಿದ್ದಾರೆ

ಅಲ್ಲು ಅರ್ಜುನ್‌ ಮತ್ತು ಸುಕುಮಾರ್‌ ಕಾಂಬಿನೇಶನ್‌ನಲ್ಲಿ ಬಂದಿದ್ದ ಆರ್ಯ, ಆರ್ಯ-2 ಚಿತ್ರಗಳು ಸೂಪರ್‌ ಹಿಟ್‌ ಆಗಿದ್ದವು. ಇದೀಗ ʻಪುಷ್ಪʼ ಚಿತ್ರ ಅಭಿಮಾನಿಗಳಲ್ಲಿ  ಭಾರಿ ನಿರೀಕ್ಷೆ ಮೂಡಿಸಿದೆ.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

spot_imgspot_img

Don't Miss