spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Monday, September 20, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಡಬಲ್ ಇಂಜಿನ್ ಸರ್ಕಾರದಿಂದ ಕಲಬುರಗಿಗೆ ಡಬಲ್ ಅನ್ಯಾಯ: ಪ್ರಿಯಾಂಕ್ ಖರ್ಗೆ

- Advertisement -Nitte

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ದಿಗಂತ ವರದಿ ಕಲಬುರಗಿ:

ಡಬಲ್ ಇಂಜಿನ್ ಸರ್ಕಾರದಿಂದ ಕಲ್ಯಾಣ ಕರ್ನಾಟಕದ ಕಂದಾಯ ವಿಭಾಗ ಕಲಬುರಗಿ ಜಿಲ್ಲೆಗೆ ಡಬಲ್ ದೋಖಾ ಆಗಿದ್ದು, ಸಂಪುಟದಲ್ಲಿ ಕಲಬುರಗಿ ಜಿಲ್ಲೆ ಕಡಗಣಿಸಿರುವುದು ಖಂಡನೀಯ ವಿಷಯವಾಗಿದೆ ಎಂದು ಕಾಂಗ್ರೆಸ್ ಶಾಸಕ ಪ್ರಿಯಾಂಕ ಖಗೆ೯ ಹೇಳಿದ್ದಾರೆ.

ಅವರು ಪತ್ರಿಕಾ ಪ್ರಕಟಣೆಯಲ್ಲಿ ಮಾತನಾಡಿ, ಸಿಎಂ ಬಸವರಾಜ್ ಬೊಮ್ಮಾಯಿ ಅವರ ಸಂಪುಟದ ನೂತನ ಸಚಿವರ ಪಟ್ಟಿ ಬಿಡುಗಡೆಯಾಗುತ್ತಿದ್ದಂತೆ ಕಲ್ಯಾಣ ಕರ್ನಾಟಕದ ಕೇಂದ್ರ ಸ್ಥಾನ ಕಲಬುರಗಿ ಜಿಲ್ಲೆಯಲ್ಲಿ ಅನ್ಯಾಯವಾಗಿದೆ. ಡಬಲ್ ‌ಇಂಜಿನ್ ಸರ್ಕಾರದಿಂದ ಜಿಲ್ಲೆಗೆ ಅನ್ಯಾಯ ನಿರಂತರವಾಗಿ ಮುಂದುವರೆದಿದೆ. ಬಿಜೆಪಿ ಸರ್ಕಾರ ಮತ್ತೊಮ್ಮೆ ಕಲಬುರಗಿ ಜಿಲ್ಲೆಗೆ ಸಂಪುಟದಲ್ಲಿ ಪ್ರಾತಿನಿಧ್ಯ ನೀಡದೆ ದೋಖಾ ಮಾಡಿದೆ ಎಂದು ಹರಿಹಾಯ್ದರು.

ಈ ಹಿಂದೆ ಯಡಿಯೂರಪ್ಪನವರು ಸಿಎಂ ಆಗಿದ್ದಾಗ ಕಲ್ಯಾಣ‌ ಕರ್ನಾಟಕ ಪ್ರದೇಶಕ್ಕೆ ಅದರಲ್ಲೂ ಕಲಬುರಗಿ ಜಿಲ್ಲೆಗೆ ಸಂಪುಟದಲ್ಲಿ ಸೂಕ್ತ ಸ್ಥಾನಮಾನ ಕಲ್ಪಿಸದೇ ಅನ್ಯಾಯವೆಸಗಿದ್ದರು. ಈಗ ಅವರ ಉತ್ತರಾಧಿಕಾರಿ ಬೊಮ್ಮಾಯಿ‌ ಅವರು ಕೂಡಾ ಮತ್ತೊಮ್ಮೆ ಈ ಪ್ರದೇಶವನ್ನು ಕಡೆಗಣನೆ ಮಾಡುವ ಮೂಲಕ ಅನ್ಯಾಯದ ಪರಂಪರೆ ಮುಂದುವರೆಸಿಕೊಂಡು ಹೋಗುತ್ತಿದ್ದಾರೆ.

ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದಾಗ ಎಂಟು ಸಚಿವರನ್ನು ಹೊಂದಿದ್ದ ಕಲಬುರಗಿ ಜಿಲ್ಲೆ ಈಗ ಒಬ್ಬರೇ ಒಬ್ಬ ಸಚಿವರನ್ನೂ ಹೊಂದದೆ ಅನಾಥವಾಗಿರುವುದು ರಾಜ್ಯ ಹಾಗೂ ಕೇಂದ್ರ ಸರ್ಕಾರದ ನಿರ್ಲಕ್ಷ್ಯತನ ಮತ್ತು ಬಿಜೆಪಿ ಸಂಸದ ಶಾಸಕರ ಅಸಹಾಯಕತೆ ಕಾರಣವಾಗಿದೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss