ಸಿಲಿಕಾನ್ ಸಿಟಿಯಲ್ಲಿ ಡಬಲ್ ಮರ್ಡರ್: ಪಾರ್ಕ್‍ನಲ್ಲಿ ಕುಳಿತಿದ್ದ ಜೋಡಿಯ ಕೊಲೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:  

ಬೆಂಗಳೂರಿನಲ್ಲಿ ಹಾಡಹಗಲೇ ಡಬಲ್ ಮರ್ಡರ್ ನಡೆದಿದೆ. ಪಾರ್ಕ್‍ನಲ್ಲಿ ಇಬ್ಬರನ್ನು ಕೊಚ್ಚಿ, ಕಲ್ಲು ಎತ್ತಿ ಹಾಕಿ ಕೊಲೆ ಮಾಡಲಾಗಿದೆ.

ಜೆಪಿ ನಗರದ ಸಾರಕ್ಕಿ ಪಾರ್ಕ್‍ನಲ್ಲಿ (Sarakki Park JP Nagar) ಇಂದು ಸಂಜೆ 4:15 ರ ಸುಮಾರಿಗೆ ನಡೆದಿದೆ. ಮೃತರನ್ನು ಸುರೇಶ್ ಮತ್ತು ಅನುಷಾ ಎಂದು ಗುರುತಿಸಲಾಗಿದೆ. ಸುರೇಶ್ ಗೊರಗುಂಟೆಪಾಳ್ಯ ನಿವಾಸಿಯಾದರೆ, ಅನುಷಾ ಜೆ.ಪಿ.ನಗರ ಬಳಿಯ ಶಾಂಕಾಬಾರಿ ನಗರ ನಿವಾಸಿ.

ಸುರೇಶ್ ಹಾಗೂ ಅನುಷಾ ಪಾರ್ಕ್ ನಲ್ಲಿ ಮಾತನಾಡ್ತಾ ಕುಳಿತಿದ್ದ ವೇಳೆ ದುಷ್ಕರ್ಮಿಗಳು ಚಾಕುವಿನಿಂದ ಇರಿದುಕೊಲೆ ಮಾಡಿದ್ದಾರೆ. ಘಟನಾ ಸ್ಥಳಕ್ಕೆ ಜೆಪಿ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!