September 27, 2026
Sunday, September 27, 2026
spot_img

ದೀದಿಗೆ ಡಬಲ್ ಶಾಕ್! TMCಯಲ್ಲಿ ಕೊನೆಯಾಗದ ಬಂಡಾಯದ ಬಿರುಗಾಳಿ: ಪಕ್ಷ ತೊರೆದ ಹಿರಿಯ ಸಂಸದ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್‌ನಲ್ಲಿ ಆಂತರಿಕ ಭಿನ್ನಮತ ಮತ್ತಷ್ಟು ತೀವ್ರಗೊಂಡಿದ್ದು, ಪಕ್ಷದ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಮಾನಸ್ ಭುನಿಯಾ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಪಕ್ಷದೊಳಗಿನ ಬೆಳವಣಿಗೆಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಅವರು, ಮುಂದಿನ ರಾಜಕೀಯ ನಿರ್ಧಾರದ ಕುರಿತು ಯಾವುದೇ ಸುಳಿವು ನೀಡಿಲ್ಲ.

ಹಿರಿಯ ನಾಯಕರ ನಡೆ ಚರ್ಚೆಗೆ ಕಾರಣ

ಇದರ ನಡುವೆಯೇ ಹಿರಿಯ ಸಂಸದ ಸುದೀಪ್ ಬಂಡೋಪಾಧ್ಯಾಯ ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿರುವುದು ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ. ಕೆಲವು ಅಸಮಾಧಾನಗೊಂಡ ಸಂಸದರು ಪ್ರತ್ಯೇಕ ಬಣ ರಚಿಸುವ ಪ್ರಯತ್ನದಲ್ಲಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ.

ಇದನ್ನೂ ಓದಿ:

ಪ್ರತ್ಯೇಕ ಬಣಕ್ಕೆ ಮಾನ್ಯತೆ ಕೋರುವ ಸಾಧ್ಯತೆ

ಲೋಕಸಭೆಯಲ್ಲಿರುವ ಬಂಡಾಯ ಸಂಸದರು ಪ್ರತ್ಯೇಕ ಗುಂಪಾಗಿ ಗುರುತಿಸಬೇಕೆಂದು ಸ್ಪೀಕರ್‌ಗೆ ಮನವಿ ಸಲ್ಲಿಸಲು ಸಿದ್ಧತೆ ನಡೆಸಿದ್ದಾರೆ ಎನ್ನಲಾಗಿದೆ. ಈಗಾಗಲೇ ಹಲವು ಸಂಸದರು ಈ ಬಣಕ್ಕೆ ಬೆಂಬಲ ಸೂಚಿಸಿರುವುದರಿಂದ, ಟಿಎಂಸಿಯ ಒಳರಾಜಕೀಯ ಮತ್ತಷ್ಟು ಕಾವು ಪಡೆದುಕೊಂಡಿದೆ.

Must Read