June 10, 2026
Wednesday, June 10, 2026
spot_img

ಮುಂಬೈ ಇಂಡಿಯನ್ಸ್‌ಗೆ ಡಬಲ್ ಶಾಕ್! ಇಬ್ಬರು ಸ್ಟಾರ್ ಆಟಗಾರರು IPLನಿಂದ ಔಟ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಐಪಿಎಲ್ ಟೂರ್ನಿಯ ಅಂತಿಮ ಹಂತದಲ್ಲಿ ಮುಂಬೈ ಇಂಡಿಯನ್ಸ್ ತಂಡಕ್ಕೆ ಭಾರೀ ಹಿನ್ನಡೆ ಎದುರಾಗಿದೆ. ತಂಡದ ಪ್ರಮುಖ ಆಟಗಾರರಾದ ಕ್ವಿಂಟನ್ ಡಿ ಕಾಕ್ ಮತ್ತು ರಾಜ್ ಅಂಗದ್ ಬಾವಾ ಗಾಯದ ಸಮಸ್ಯೆಯಿಂದಾಗಿ ಟೂರ್ನಿಯಿಂದ ಹೊರಬಿದ್ದಿದ್ದಾರೆ. ಈ ಕುರಿತು ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ಅಧಿಕೃತ ಮಾಹಿತಿ ನೀಡಿದೆ.

ಡಿ ಕಾಕ್‌ಗೆ ಮಣಿಕಟ್ಟು ಗಾಯ

ದಕ್ಷಿಣ ಆಫ್ರಿಕಾ ಆಟಗಾರ ಕ್ವಿಂಟನ್ ಡಿ ಕಾಕ್ ಕಳೆದ ತಿಂಗಳು ಎಡಗೈ ಮಣಿಕಟ್ಟಿಗೆ ಗಾಯ ಮಾಡಿಕೊಂಡಿದ್ದರು. ಗಾಯದ ಕಾರಣದಿಂದ ಅವರು ಈಗಾಗಲೇ ಕಳೆದ ಮೂರು ಪಂದ್ಯಗಳಿಂದ ದೂರ ಉಳಿದಿದ್ದರು. ಇದೀಗ ಸಂಪೂರ್ಣ ಚೇತರಿಸಿಕೊಳ್ಳದ ಕಾರಣ ಉಳಿದ ಪಂದ್ಯಗಳಿಗೂ ಅಲಭ್ಯರಾಗಿದ್ದಾರೆ.

ರಾಜ್ ಬಾವಾ ಬೆರಳಿಗೆ ಗಾಯ

ಯುವ ಆಲ್‌ರೌಂಡರ್ ರಾಜ್ ಅಂಗದ್ ಬಾವಾ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಬಲಗೈ ಹೆಬ್ಬೆರಳಿಗೆ ಗಾಯ ಮಾಡಿಕೊಂಡಿದ್ದರು. ವೈದ್ಯಕೀಯ ಪರೀಕ್ಷೆಯ ಬಳಿಕ ಅವರಿಗೆ ವಿಶ್ರಾಂತಿ ಅಗತ್ಯ ಎಂದು ತಂಡದ ವೈದ್ಯಕೀಯ ಸಿಬ್ಬಂದಿ ಸಲಹೆ ನೀಡಿದೆ.

ಇದನ್ನೂ ಓದಿ:

ಪ್ಲೇಆಫ್ ಕನಸು ಈಗಾಗಲೇ ಭಗ್ನ

ಈ ಸೀಸನ್‌ನಲ್ಲಿ ಮುಂಬೈ ಇಂಡಿಯನ್ಸ್ ಈಗಾಗಲೇ ಪ್ಲೇಆಫ್ ರೇಸ್‌ನಿಂದ ಹೊರಬಿದ್ದಿದೆ. ಆದರೂ ಉಳಿದ ಎರಡು ಪಂದ್ಯಗಳಲ್ಲಿ ಉತ್ತಮ ಪ್ರದರ್ಶನ ನೀಡುವ ನಿರೀಕ್ಷೆಯಲ್ಲಿದ್ದ ತಂಡಕ್ಕೆ ಈ ಗಾಯಗಳು ಮತ್ತಷ್ಟು ಹಿನ್ನಡೆ ತಂದಿವೆ.

ಇಂದು ಕೆಕೆಆರ್ ವಿರುದ್ಧ ಸೆಣೆಸಾಟ

ಇಂದು ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ ಕಣಕ್ಕಿಳಿಯಲಿದೆ. ಪ್ರಮುಖ ಆಟಗಾರರ ಅನುಪಸ್ಥಿತಿಯಲ್ಲಿ ತಂಡ ಯಾವ ರೀತಿ ಪ್ರದರ್ಶನ ನೀಡಲಿದೆ ಎಂಬುದು ಕುತೂಹಲ ಮೂಡಿಸಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !