ಹೊಸದಿಗಂತ ಡಿಜಿಟಲ್ ಡೆಸ್ಕ್;
ನಟ ದರ್ಶನ್ ಗೆ ರಾಜಾತಿಥ್ಯ ವಿಚಾರಕ್ಕೆ ಸಂಬಂಧಿಸಿದಂತೆಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸಲು ಕೋರ್ಟ್ ಅನುಮತಿ ನೀಡಿತ್ತು. ಆದರೆ ದರ್ಶನ್ ವಿರುದ್ಧ ಜೈಲಿನಲ್ಲಿ ದಾಖಲಾದ ಪ್ರಕರಣದ ಕುರಿತು ತನಿಖೆ ನಡೆಯುತ್ತಿರುವುದರಿಂದ ಇಂದು ದರ್ಶನ್ ಸ್ಥಳಾಂತರಕ್ಕೆ ವಿಳಂಬವಾಗಿದೆ.
ಪರಪ್ಪನ ಅಗ್ರಹಾರ ಜೈಲಿನಿಂದ ನಟ ದರ್ಶನ್ ನಾಳೆ ಬಳ್ಳಾರಿ ಸೆಂಟ್ರಲ್ ಜೈಲಿಗೆ ಶಿಫ್ಟ್ ಆಗಲಿದ್ದಾರೆ.
ದರ್ಶನ್ ವಿರುದ್ಧ ದಾಖಲಾದ ಪ್ರಕರಣದ ಬಗ್ಗೆ ತನಿಖೆ ನಡೆಯುತ್ತಿದೆ. ಇಂದು ದೂರುದಾರ ಸೋಮಶೇಖರ್ ವಿಚಾರಣೆ ನಡೆಯಲಿದೆ. ಪರಪ್ಪನ ಅಗ್ರಹಾರ ಜೈಲಿನ ಉಪ ಮಹಾ ನಿರೀಕ್ಷಕ ದರ್ಶನ್ ಕುಳಿತಿದ್ದ ಜಾಗದಲ್ಲಿ ದೂರುದಾರ ಮತ್ತು ಆರೋಪಿ ದರ್ಶನ್ ಸಮಕ್ಷಮ ಮಹಜರು ಪ್ರಕ್ರಿಯೆ ನಡೆಯಲಿದೆ. ಮಹಜರು ನಡೆಸಿ ಪೊಲೀಸರು ಹೇಳಿಕೆ ದಾಖಲಿಸಿಕೊಂಡಿದ್ದಾರೆ.