ಬಿಜೆಪಿ 40 ಸ್ಥಾನ ಗೆಲ್ಲುವುದೇ ಅನುಮಾನ: ಡಿಕೆ ಶಿವಕುಮಾರ್

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 140ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತದೆ ಎಂದು ಸಮೀಕ್ಷೆಗಳು ಹೇಳಿವೆ ಎಂದಿದ್ದ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು, ಈ ಬಾರಿ ಬಿಜೆಪಿ 65ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವುದಿಲ್ಲ. 40 ಸ್ಥಾನಗಳಿಗೆ ಕುಸಿಯಲಿದೆ ಎಂದು ಬುಧವಾರ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆಶಿ, “ಬಿಜೆಪಿಯವರು ಏನು ಬೇಕಾದರೂ ಹೇಳಿಕೊಳ್ಳಲಿ. ಆದರೆ ಅವರ ಸಂಖ್ಯೆ 60-65 ದಾಟುವುದಿಲ್ಲ. ಇದು ಖಚಿತ. ಆದರೆ ನನ್ನ ಪ್ರಕಾರ ಅವರ ಸಂಖ್ಯೆ 40ಕ್ಕೆ ಇಳಿದರೂ ಆಶ್ಚರ್ಯವಿಲ್ಲ ಎಂದರು.

ಈ ಬಿಜೆಪಿ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಎಲ್ಲ ವರ್ಗದ ಜನರು ಆಕ್ರೋಶಗೊಂಡಿದ್ದಾರೆ. ನಮಗೆ ನಮ್ಮ ಸಂಖ್ಯೆಯ ಬಗ್ಗೆ ಗ್ಯಾರಂಟಿ ಇದೆ ಮತ್ತು ಬಿಜೆಪಿಯ ಸಂಖ್ಯೆ 65 ಮೀರುವುದಿಲ್ಲ ಎಂಬ ಭರವಸೆಯೂ ನಮಗೆ ಇದೆ ಎಂದು ಡಿಕೆಶಿ ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!